ಬೆಂಗಳೂರು: ತಿರುಪತಿಯ ತಿರುಮಲದಲ್ಲಿರುವ ಕರ್ನಾಟಕ ಛತ್ರದಲ್ಲಿ ‘ಕೃಷ್ಣ ರಾಜೇಂದ್ರ ಕಲ್ಯಾಣ ಮಂಟಪ’ವನ್ನು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.

ನೂತನವಾಗಿ ನಿರ್ಮಾಣಗೊಂಡಿರುವ ಮೈಸೂರು ಕಾಂಪ್ಲೆಕ್ಸ್ನ (ಹೊಸ ಕರ್ನಾಟಕ ಛತ್ರ) ಒಂದು ಬ್ಲಾಕ್ನಲ್ಲಿ ನಿರ್ಮಿಸಲಾಗಿರುವ ಕೃಷ್ಣರಾಜೇಂದ್ರ ಒಡೆಯರ್ ಕಲ್ಯಾಣ ಮಂಟಪದಲ್ಲಿ 13 ಕೊಠಡಿಗಳು ಮತ್ತು 500 ಆಸನಗಳಿವೆ. ಕರ್ನಾಟಕದಿಂದ ಬಂದು ತಿರುಮಲದಲ್ಲಿ ಮದುವೆ, ನಾಮಕರಣ ಮೊದಲಾದ ಸಮಾರಂಭಗಳನ್ನು ಆಯೋಜನೆ ಮಾಡುವ ಭಕ್ತರಿಗೆ ಇದು ಲಭ್ಯವಿರಲಿದೆ. ಆನ್ಲೈನ್ ಮೂಲಕ ಕಾಯ್ದಿರಿಸಲು ಅವಕಾಶ ನೀಡಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದರು.

36 ಕೊಠಡಿಗಳ ವಿಐಪಿ ಬ್ಲಾಕ್, ಕಲ್ಯಾಣಿ ಮತ್ತು ಕರ್ನಾಟಕ ಛತ್ರದಲ್ಲಿ ದೇವಸ್ಥಾನ ನಿರ್ಮಾಣ ಕಾರ್ಯಕ್ರಮ ಬಹುತೇಕ ಪೂರ್ಣಗೊಂಡಿದ್ದು, ಸೆಪ್ಟೆಂಬರ್ನಲ್ಲಿ ಉದ್ಘಾಟಿಸಲಾಗುವುದು. ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯ, ಮುಜರಾಯಿ ಇಲಾಖೆ ಆಯುಕ್ತ ಎಂ.ವಿ. ವೆಂಕಟೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.