ಬೆಂಗಳೂರು: ‘ಕನ್ನಡ ಭಾಷೆಯ ಹುಟ್ಟಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕನ್ನಡಿಗರಲ್ಲಿ ಆಕ್ರೋಶವನ್ನುಂಟು ಮಾಡಿರುವ ತಮಿಳು ನಟ ಕಮಲ್ ಹಾಸನ್, ಈಗಲಾದರೂ ತನ್ನ ತಪ್ಪನ್ನು ಒಪ್ಪಿಕೊಂಡು ಕನ್ನಡಿಗರ ಬಳಿ ಕ್ಷಮೆ ಕೋರಬೇಕು’ ಎಂದು ಕರ್ನಾಟಕ ವಿಕಾಸ ರಂಗ ಆಗ್ರಹಿಸಿದೆ.

‘ತಮಿಳು ಭಾಷೆಗೆ ಈವರೆಗೂ ಅಂಕಿಯನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ. ಕನ್ನಡ ಭಾಷೆಗೆ ತನ್ನದೇ ಆದ ಅಂಕಿಗಳಿವೆ. ಇದರಿಂದಲೇ ಗೊತ್ತಾಗಲಿದೆ, ಕನ್ನಡ ಭಾಷೆ ಎಷ್ಟು ಶ್ರೇಷ್ಠವೆಂದು. ಸಾಮಾನ್ಯ ಜ್ಞಾನ ಇಲ್ಲದ, ಇತಿಹಾಸದ ಅರಿವಿಲ್ಲದ ಕಮಲ್ ಹಾಸನ್ ಅನಗತ್ಯವಾಗಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಅವರು ಹೈಕೋರ್ಟ್ ತೀರ್ಪನ್ನು ಗೌರವಿಸಬೇಕು’ ಎಂದು ಕರ್ನಾಟಕ ವಿಕಾಸ ರಂಗದ ರಾಜ್ಯ ಘಟಕದ ಅಧ್ಯಕ್ಷ ವ.ಚ. ಚನ್ನೇಗೌಡ ಹೇಳಿದ್ದಾರೆ.

‘ಕನ್ನಡಿಗರ ಆಕ್ರೋಶ ಮುಂದೆ ಹಲವು ತಿರುವುಗಳನ್ನು ಪಡೆದುಕೊಳ್ಳುವ ಸಾಧ್ಯತೆಯಿದೆ. ಮುಂದಿನ ಆಗು ಹೋಗುಗಳಿಗೆ ಅವರೇ ಹೊಣೆಯಾಗಬೇಕಾಗುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.