ಸೋಮವಾರ, ಸೆಪ್ಟೆಂಬರ್ 28, 2020
24 °C

ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿ ಕಮಲ್‌ ಪಂತ್ ನೇಮಕ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಕಮಲ್ ಪಂತ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕೆಲವೇ ಗಂಟೆಗಳಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ಇದುವರೆಗೂ ಕಮಿಷನರ್ ಸ್ಥಾನದಲ್ಲಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಎಡಿಜಿಪಿ ಆಗಿ ವರ್ಗಾಯಿಸಲಾಗಿದೆ. ಕಮಲ್ ಪಂತ್ ಅವರಿಗೆ ಅವರಿಗೆ ಅಧಿಕಾರ ಹಸ್ತಾಂತರಿಸಿ ಭಾಸ್ಕರ್ ರಾವ್ ಹೊಸ ಹುದ್ದೆಗೆ ಹೋಗಲಿದ್ದಾರೆ‌.

1990ನೇ ಐಪಿಎಸ್ ಬ್ಯಾಚ್ ಅಧಿಕಾರಿಯಾದ ಕಮಲ್ ಪಂತ್ ಸದ್ಯ ರಾಜ್ಯ ಗುಪ್ತದಳದ ಎಡಿಜಿಪಿ ಆಗಿದ್ದರು. ಅವರು ಈಗ ಕಮಿಷನರ್ ಆಗಿ ನೇಮಕಗೊಂಡಿದ್ದು, ಸದ್ಯದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ.

ಗುಪ್ತದಳದ ಎಡಿಜಿಪಿ ಆಗಿ, ಸಿಐಡಿಯಲ್ಲಿದ್ದ ಎಡಿಜಿಪಿ ಬಿ.ದಯಾನಂದ್ ಅವರನ್ನು ವರ್ಗಾಯಿಸಲಾಗಿದೆ‌. ಅವರು ಸಹ ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ.


ರಾಜ್ಯ ಸರ್ಕಾರ ಹೊರಡಿಸಿರುವ ವರ್ಗಾವಣೆ ಆದೇಶ ಪ್ರತಿ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು