ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಂತ್ಯ ಕರ್ಫ್ಯೂ: ಸೂಕ್ತ ದಾಖಲೆ ಇದ್ದರೆ ಅನುವು, ಪೊಲೀಸ್ ಕಮಿಷನರ್ ಕಮಲ್ ಪಂತ್

ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್
Last Updated 5 ಜನವರಿ 2022, 19:32 IST
ಅಕ್ಷರ ಗಾತ್ರ

ಬೆಂಗಳೂರು: ‘ವಾರಾಂತ್ಯ ಕರ್ಫ್ಯೂ ವೇಳೆ ಪ್ರಯಾಣಿಸುವವರಿಗೆ ಪೊಲೀಸ್ ಇಲಾಖೆ ಯಾವುದೇ ಪಾಸ್‌ಗಳನ್ನು ವಿತರಿಸುವುದಿಲ್ಲ. ಗುರುತಿನ ಚೀಟಿ ಅಥವಾ ಸೂಕ್ತ ದಾಖಲೆಗಳಿದ್ದರೆ ಮಾತ್ರ ಜನರ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದರು.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು,‘ಕರ್ಫ್ಯೂ ಸಮಯದಲ್ಲಿಬೇರೆ ಸ್ಥಳಗಳಿಗೆ ಪ್ರಯಾಣಿಸುವವರು ಪ್ರಯಾಣಕ್ಕೆ ಸಂಬಂಧಿಸಿದ ಟಿಕೆಟ್‌ಗಳನ್ನು ತೋರಿಸಬೇಕು. ಆಸ್ಪತ್ರೆಗಳಿಗೆ ತೆರಳುವವರೂ ಸೂಕ್ತ ದಾಖಲೆಗಳನ್ನು ಹೊಂದಿರಬೇಕು. ಯಾವುದೇ ದಾಖಲೆಗಳಿಲ್ಲದೆ, ಸುಖಾಸುಮ್ಮನೆ ರಸ್ತೆಗಳಲ್ಲಿ ಸಂಚರಿಸಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಲಿದ್ದೇವೆ’ ಎಂದು ಎಚ್ಚರಿಸಿದರು.

‘ಸರ್ಕಾರದ ನಿಯಮಗಳನ್ನು ನಗರದಾದ್ಯಂತ ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು. ಇದಕ್ಕಾಗಿಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಪೊಲೀಸರ ಜೊತೆ ಸಭೆ ನಡೆಸಲಾಗಿದೆ. ಕರ್ಫ್ಯೂ ಅವಧಿಯಲ್ಲಿ ರಸ್ತೆಗಳಲ್ಲಿ ಚೆಕ್‌ಪೋಸ್ಟ್‌ ಹಾಕಲಾಗುವುದು.ಈ ಬಗ್ಗೆ ಡಿಸಿಪಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಅವರು ಠಾಣಾಧಿಕಾರಿಗಳೊಂದಿಗೆ ಚರ್ಚಿಸಿ, ತಮ್ಮ ವ್ಯಾಪ್ತಿಗಳಲ್ಲಿ ಕ್ರಮ ತೆಗೆದುಕೊಳ್ಳುತ್ತಾರೆ’ ಎಂದರು.

‘ಸರ್ಕಾರ ಆದೇಶದಂತೆ ಪಬ್‌, ರೆಸ್ಟೋರೆಂಟ್‌ ಸೇರಿದಂತೆ ಸೂಚಿಸಿರುವ ಸ್ಥಳಗಳಿಗೆ ಶೇ 50ರಷ್ಟು ಮಂದಿಗೆ ಮಾತ್ರ ಪ್ರವೇಶ ನೀಡಲಾಗುವುದು.ನಿಯಮ ಉಲ್ಲಂಘನೆಗೆ ಅವಕಾಶವೇ ಇಲ್ಲ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT