ಶನಿವಾರ, ಆಗಸ್ಟ್ 13, 2022
27 °C

ವಾಹನ ಕಳವು: 75 ದಿನಗಳಲ್ಲಿ ಹಿಂಬರಹ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕಳವಾದ ವಾಹನಗಳನ್ನು 60 ದಿನಗಳಲ್ಲಿ ಪತ್ತೆ ಹಚ್ಚಿ ಮಾಲೀಕರಿಗೆ ಹಿಂದಿರುಗಿಸಬೇಕು. ಇದು ಸಾಧ್ಯವಾಗದಿದ್ದಲ್ಲಿ, 75 ದಿನಗಳಲ್ಲಿ ಮಾಲೀಕರು ವಿಮಾ ಹಣ ಪಡೆದುಕೊಳ್ಳಲು ಅನುಕೂಲವಾಗುವಂತೆ ಹಿಂಬರಹ ನೀಡಬೇಕು’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ‘ವಾಹನಗಳನ್ನು ಶೀಘ್ರವಾಗಿ ಪತ್ತೆ ಹಚ್ಚುವಂತೆ ಅಧಿಕಾರಿಗೆ ಸೂಚಿಸಲಾಗಿದೆ. ಮಾಲೀಕರಿಗೆ ವಾಹನ ಹಿಂತಿರುಗಿಸಲು ಸಾಧ್ಯವಾಗದಿದ್ದರೆ, ಅದನ್ನು ‘ಪತ್ತೆಯಾಗದ ಪ್ರಕರಣ’ ಎಂದು ಪರಿಗಣಿಸಬೇಕು. ತನಿಖೆ ಆರಂಭವಾದ 75 ದಿನದೊಳಗೆ ಹಿಂಬರಹ ಸಿಗದಿದ್ದಲ್ಲಿ, ದೂರುದಾರರು ಸಂಬಂಧಪಟ್ಟ ಡಿಸಿಪಿ, ಹೆಚ್ಚುವರಿ ಪೊಲೀಸ್ ಕಮಿಷನರ್ ಅಥವಾ ಪೊಲೀಸ್ ಕಮಿಷನರ್ ಅವರನ್ನು ಸಂಪರ್ಕಿಸಬಹುದು’ ಎಂದೂ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.