ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೀರ್ತನೆಗಳೊಂದಿಗೆ ಮೌಲ್ಯಯುತ ಸಂದೇಶ ನೀಡಿದ ಕನಕದಾಸರು: ಶಾಸಕ ಮುನಿರಾಜು

ಕನಕದಾಸರ ಜಯಂತಿ
Published 30 ನವೆಂಬರ್ 2023, 14:15 IST
Last Updated 30 ನವೆಂಬರ್ 2023, 14:15 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: 'ಕೀರ್ತನೆಗಳ ಮೂಲಕ ಸಮಾಜದ ಓರೆಕೋರೆಗಳನ್ನು ತಿದ್ದಿ ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರಣೆ ನೀಡಿದವರು ಕನಕದಾಸರು' ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.

ಶೆಟ್ಟಿಹಳ್ಳಿಯಲ್ಲಿ ಕ್ಷೇತ್ರದ ಬಿಜೆಪಿ ವತಿಯಿಂದ ಆಯೋಜಿಸಲಾದ ಕನಕದಾಸ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

'ಕನಕದಾಸರ ಸಂದೇಶಗಳು ಎಲ್ಲಾ ಕಾಲಕ್ಕೂ ಅನ್ವಯವಾಗುತ್ತವೆ. ಯಾವುದೇ ಒಂದು ಜಾತಿ, ಮತ, ಪ್ರದೇಶ, ಭಾಷೆಗೆ ಸೀಮಿತವಾಗದ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳನ್ನು ಅವರು ನೀಡಿದ್ದಾರೆ' ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಪಿ.ಎಚ್.ರಾಜು, ವಿನೋದ್ ಗೌಡ, ಬಿಜೆಪಿ ಮುಖಂಡರಾದ ಸುರೇಶ್ ಕೆಂಪೇಗೌಡ, ರಘು, ಕಣ್ಣಪ್ಪ, ಮಂಜು ಭಾಷಣಿ ಹಾಗೂ ಸ್ಥಳೀಯ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT