ಬೆಂಗಳೂರು: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು 2025–26ನೇ ಸಾಲಿನ ಕನಕ ಗೌರವ ಪುರಸ್ಕಾರಕ್ಕೆ ಮೈಸೂರಿನ ಅಕ್ಕಮಹಾದೇವಿ ಹಾಗೂ ಕನಕ ಯುವ ಪುರಸ್ಕಾರಕ್ಕೆ ಬೀದರ್ನ ರವೀಂದ್ರ ಲಂಜವಾಡಕರ್ ಅವರನ್ನು ಆಯ್ಕೆ ಮಾಡಿದೆ.

ಕನಕ ಗೌರವ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಅಕ್ಕಮಹಾದೇವಿ ಅವರು ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕಿಯಾಗಿದ್ದರು. ಈ ಪುರಸ್ಕಾರವು ₹75 ಸಾವಿರ ನಗದು, ಫಲಕವನ್ನು ಒಳಗೊಂಡಿದೆ.

ಕನಕ ಯುವ ಪುರಸ್ಕಾರಕ್ಕೆ ಆಯ್ಕೆಯಾಗಿರುವ ರವೀಂದ್ರ ಲಂಜವಾಡಕರ್ ಅವರು ವೃತ್ತಿಯಿಂದ ಪ್ರಥಮದರ್ಜೆ ಸಹಾಯಕರು. ಸಮಾಜಮುಖಿ ದಾಸ ಸಾಹಿತ್ಯ ಕುರಿತು ಸಂಶೋಧನೆ ನಡೆಸಿದ್ದಾರೆ. ಈ ಪುರಸ್ಕಾರವು ₹50 ಸಾವಿರ ನಗದು, ಫಲಕ ಒಳಗೊಂಡಿದೆ ಎಂದು ಕೇಂದ್ರದ ಅಧ್ಯಕ್ಷ ಕಾ.ತ.ಚಿಕ್ಕಣ್ಣ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.