ಶುಕ್ರವಾರ, ಏಪ್ರಿಲ್ 3, 2020
19 °C

ಕಲಾಪದಲ್ಲಿ ಕಡ್ಡಾಯ ಹಾಜರು: ಶಾಸಕರಿಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಮಂಡಲದ ಅಧಿವೇಶನಲ್ಲಿ ಪಕ್ಷದ ಎಲ್ಲ ಶಾಸಕರೂ ಕಲಾಪದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಾಕೀತು ಮಾಡಿದ್ದಾರೆ.

ವಿಧಾನಪರಿಷತ್‌ ಚುನಾವಣೆಯಲ್ಲಿ ಸವದಿ ಪರವಾಗಿ ಬೆಳಿಗ್ಗೆಯೇ ಮತ ಚಲಾಯಿಸಿ ನಂತರ ಸದನದ ಒಳಗೆ ಹೋಗೋಣ, ಸಂಜೆಯವರೆಗೆ ಕಾಯುವುದು ಬೇಡ ಎಂದು ಅವರು ಹೇಳಿದರು. ಭಾನುವಾರ ರಾತ್ರಿ ಶಾಂಗ್ರಿಲಾ ಹೊಟೇಲ್‌ನಲ್ಲಿ ಸಭೆ ನಡೆಯಿತು.

ಬಜೆಟ್‌ಗೆ ಸಂಬಂಧಿಸಿದಂತೆ ಯಾವುದೇ ಸಲಹೆಗಳಿದ್ದರೂ ನೀಡಬಹುದು ಎಂದು ಯಡಿಯೂರಪ್ಪ ಹೇಳಿದರು.

ಯತ್ನಾಳ ಗೈರು: ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿ ಮೂಲದ ಶಾಸಕರಿಗೆ ಸಚಿವ ಸ್ಥಾನ ನೀಡುವ ಕುರಿತು ಮಾತನಾಡುತ್ತೇನೆ
ಎಂದು ಹೇಳಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಭೆಗೆ ಗೈರಾಗಿದ್ದರು.

ತಮಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಮಾತನಾಡಲು ಅವಕಾಶ ನೀಡಬೇಕು ಎಂದು ಯತ್ನಾಳ ಅವರು ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಸಚಿವರಾದ ಕೆ.ಎಸ್‌.ಈಶ್ವರಪ್ಪ ಮತ್ತು ಬಿ.ಶ್ರೀರಾಮುಲು ಅವರು ವೈಯಕ್ತಿಕ ಕಾರಣಗಳಿಗಾಗಿ ಸಭೆಗೆ ಹಾಜರಾಗಿರಲಿಲ್ಲ. ನೂತನ ಸಚಿವರು ಸಭೆಯಲ್ಲಿ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು