ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಮುಂದಾದಾಗ ಸ್ಕೂಟರ್ ಆಯತಪ್ಪಿ ಬಿದ್ದು ನಟಿ ಸುನೇತ್ರಾ ಪಂಡಿತ್ ಅವರ ತಲೆ ಹಾಗೂ ಮೂಗಿಗೆಗಾಯವಾಗಿದೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎನ್.ಆರ್.ಕಾಲೊನಿಯಲ್ಲಿ ಶನಿವಾರ ರಾತ್ರಿ 11.30ರ ಸುಮಾರಿಗೆ ಅವಘಡ ಸಂಭವಿಸಿದೆ.

'ಅಮ್ಮ, ಚಿತ್ರೀಕರಣವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಶನಿವಾರ ಬೆಳಿಗ್ಗೆಯೇ ಮನೆಯಿಂದ ಹೊರಹೋಗಿದ್ದರು. ಚಿತ್ರೀಕರಣ ಮುಗಿದ ಬಳಿಕ ಸಭೆಯೊಂದರಲ್ಲಿ ಭಾಗಿಯಾಗಿ ಮನೆಗೆ ಮರಳುತ್ತಿದ್ದಾಗ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆಗೂ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ' ಎಂದು ಸುನೇತ್ರಾ ಅವರ ಮಗಳು ಶ್ರೇಯಾ ತಿಳಿಸಿದ್ದಾರೆ.

'ಆಸ್ಪತ್ರೆಗೆ ಸೇರಿಸಿದ ವ್ಯಕ್ತಿಯೇ ನಮಗೆ ಕರೆ ಮಾಡಿ ವಿಷಯ ತಿಳಿಸಿದ್ದರು' ಎಂದು ಹೇಳಿದ್ದಾರೆ.

ಸುನೇತ್ರಾ ಅವರಿಗೆ ಬಸವನ ಗುಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಸ್ತೆ ಗುಂಡಿಯಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.

ಲಾಕಪ್ ರಿಯಾಲಿಟಿ ಶೋ ಗೆದ್ದ ಹಾಸ್ಯ ಕಲಾವಿದ ಮುನಾವರ್ ಫಾರೂಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.