ಶುಕ್ರವಾರ, ಡಿಸೆಂಬರ್ 4, 2020
22 °C

ಬಿ.ವಿ. ರಾಘವನ್‌ಗೆ ‘ಕನ್ನಡ ಅರವಿಂದ ಪ್ರಶಸ್ತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕನ್ನಡ ಗೆಳೆಯರ ಬಳಗವು ಕೊಡಮಾಡುವ ‘ಕನ್ನಡ ಅರವಿಂದ ಪ್ರಶಸ್ತಿ’ಗೆ ಕನ್ನಡ ಪರ ಹೋರಾಟಗಾರ ಬಿ.ವಿ ರಾಘವನ್ ಹಾಗೂ ‘ಕನ್ನಡ ಚಿರಂಜೀವಿ ಪ್ರಶಸ್ತಿ’ಗೆ ಕನ್ನಡ ಪರಿಚಾರಕ ಎಸ್. ಶಿವಲಿಂಗಯ್ಯ ಆಯ್ಕೆಯಾಗಿದ್ದಾರೆ. 

ಬಳಗವು ಡಿ.6ರಂದು ಬಸವನಗುಡಿಯ ನ್ಯಾಷನಲ್ ಸ್ಕೂಲ್ ವೃತ್ತದಲ್ಲಿರುವ ಬಿ.ಎಂ.ಶ್ರೀ ಪ್ರತಿಮೆ ಎದುರು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಂಡಿದೆ. ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅಧಿಕ ಅಂಕ ಪಡೆದ 10 ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಸನ್ಮಾನಿಸಲಾಗುವುದು. ತಮಿಳುನಾಡಿನ ಗುಮ್ಮಳಾಪುರದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶೇ 100ರಷ್ಟು ಫಲಿತಾಂಶಕ್ಕೆ ಕಾರಣರಾದ ಮುಖ್ಯೋಪಾಧ್ಯಾಯ ಪಿ. ವೆಂಕಟೇಶ್ ಅವರನ್ನು ಗೌರವಿಸಲಾಗುವುದು ಎಂದು ಸಂಚಾಲಕ ರಾ.ನಂ. ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು