ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶೇಷಗಿರಿ ರಾವ್ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಿ: ವ.ಚ. ಚನ್ನೇಗೌಡ ಆಗ್ರಹ

Published 17 ಮಾರ್ಚ್ 2024, 0:00 IST
Last Updated 17 ಮಾರ್ಚ್ 2024, 0:00 IST
ಅಕ್ಷರ ಗಾತ್ರ

ಬೆಂಗಳೂರು: ‘ಕನ್ನಡ ಸಾಹಿತ್ಯದ ಶೇಷ್ಠ ವಿಮರ್ಶಕರಾಗಿದ್ದ ಪ್ರೊ.ಎಲ್.ಎಸ್. ಶೇಷಗಿರಿ ರಾವ್ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಪ್ರಶಸ್ತಿ ಸ್ಥಾಪಿಸಬೇಕು’ ಎಂದು ಕರ್ನಾಟಕ ವಿಕಾಸರಂಗದ ಅಧ್ಯಕ್ಷ ವ.ಚ. ಚನ್ನೇಗೌಡ ಆಗ್ರಹಿಸಿದರು. 

ಕನ್ನಡ ಗೆಳೆಯರ ಬಳಗ ಹಾಗೂ ಕರ್ನಾಟಕ ವಿಕಾಸ ರಂಗ ಜಂಟಿಯಾಗಿ ನಗರದಲ್ಲಿ ಶನಿವಾರ ಹಮ್ಮಿಕೊಂಡ ‘ಕನ್ನಡ ಬಾವುಟ ಹಾರಿಸಿದವರು ನೆನಪಿನ ಮಾಲೆ–15’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

‘ಈ ವರ್ಷ ಶೇಷಗಿರಿ ರಾವ್ ಅವರ ಜನ್ಮ ಶತಮಾನೋತ್ಸವದ ವರ್ಷವಾಗಿದೆ. ಆದ್ದರಿಂದ ಸರ್ಕಾರವು ಅವರ ಹೆಸರಿನಲ್ಲಿ ಪ್ರತಿ ವರ್ಷ ನಾಡಿನ ವಿಮರ್ಶಕರೊಬ್ಬರಿಗೆ ಪ್ರಶಸ್ತಿ ನೀಡಿ, ಸ್ಮರಿಸುವ ಕಾರ್ಯ ಮಾಡಬೇಕು. ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ಕನ್ನಡ ದೀವಿಗೆಯನ್ನು ಹಿಡಿಯುವ ಮೂಲಕ ಕನ್ನಡ ಚಳವಳಿಗೆ ಮೌಲ್ಯವನ್ನು ತಂದುಕೊಟ್ಟರು. ಸರೋಜಿನಿ ಮಹಿಷಿ ವರದಿ ಜಾರಿಗಾಗಿ ಶ್ರಮಿಸಿದರು’ ಎಂದು ಹೇಳಿದರು.

ಕನ್ನಡ ಗಣಕ ಪರಿಷತ್ತಿನ ಕಾರ್ಯದರ್ಶಿ ಜಿ.ಎನ್. ನರಸಿಂಹಮೂರ್ತಿ, ‘ಶೇಷಗಿರಿ ರಾವ್ ಅವರು ಕನ್ನಡ ಚಳವಳಿಗೆ ಮೌಲ್ಯ ತಂದುಕೊಟ್ಟಿದ್ದರು. ಕನ್ನಡಪರ ಹೋರಾಟಗಳಲ್ಲಿ ಪಾಲ್ಗೊಂಡು, ನಾಡು–ನುಡಿಯ ಶ್ರೆಯೋಭಿವೃದ್ಧಿಗೆ ದುಡಿದರು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT