ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡು ಕರ್ನಾಟಕಕ್ಕೆ ಸೇರಿಸಿ: ಲೇಖಕಿ ಇಂದಿರಾ ಹೆಗ್ಗಡೆ ಆಗ್ರಹ

Published 28 ಜೂನ್ 2023, 14:47 IST
Last Updated 28 ಜೂನ್ 2023, 14:47 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಸರಗೋಡು ಕರ್ನಾಟಕಕ್ಕೆ ಸೇರಿದಾಗ ಮಾತ್ರ ಕಯ್ಯಾರ ಕಿಞ್ಞಣ್ಣ ರೈ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಬೇಕು’ ಎಂದು ಲೇಖಕಿ ಇಂದಿರಾ ಹೆಗ್ಗಡೆ ಆಗ್ರಹಿಸಿದರು. 

ಕನ್ನಡ ಗೆಳೆಯರ ಬಳಗ ಹಾಗೂ ಕರ್ನಾಟಕ ವಿಕಾಸ ರಂಗ ಜಂಟಿಯಾಗಿ ಆಯೋಜಿಸಿದ ಕನ್ನಡ ಬಾವುಟ ಹಾರಿಸಿದವರು ನೆನಪಿನ ಮಾಲೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ, ಮಾತನಾಡಿದರು. 

‘ಕಾಸರಗೋಡು ಕರ್ನಾಟಕಕ್ಕೆ ಸೇರಬೇಕೆಂದು ತಮ್ಮ ಉಸಿರಿರುವವರೆಗೂ ಕಯ್ಯಾರ ಕಿಞ್ಞಣ್ಣ ರೈ ಶ್ರಮಿಸಿದರು. ಬ್ರಿಟಿಷರ ಆಳ್ವಿಕೆ ನಂತರದ ಕಾಲದಲ್ಲೂ ಕಾಸರಗೋಡು ಅಪ್ಪಟ ಕನ್ನಡ ನಾಡಾಗಿತ್ತು. ಕೋರ್ಟ್ ತೀರ್ಪುಗಳು ಕನ್ನಡದಲ್ಲಿ ಬರುತ್ತಿದ್ದವು. ಈಗಲೂ ಅಲ್ಲಿ ನೂರಾರು ಕನ್ನಡ ಶಾಲೆಗಳಿವೆ. ಮಹಾಜನ್ ವರದಿಯಲ್ಲೂ ಕಾಸರಗೋಡು ಕರ್ನಾಟಕಕ್ಕೆ ಸೇರಬೇಕೆಂದು ಹೇಳಲಾಗಿದೆ. ಕರ್ನಾಟಕ ಸರ್ಕಾರ ಈ ನಿಟ್ಟಿನಲ್ಲಿ ಆಸಕ್ತಿ ವಹಿಸಬೇಕು’ ಎಂದು ಹೇಳಿದರು. 

ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ, ‘ಮಹಾಜನ್ ವರದಿಯು ಕರ್ನಾಟಕಕ್ಕೆ ನೀಡಿರುವ ಕಾಸರಗೋಡನ್ನು ನಮಗೆ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಕೇಳದಿರುವುದು ನಾಚಿಕೆಗೇಡಿನ ಸಂಗತಿ. ಪರಿಷ್ಕೃತ ಡಾ. ಸರೋಜಿನಿ ಮಹಿಷಿ ವರದಿಯ ಜಾರಿಗಾಗಿ ಈಗಾಗಲೇ ಮುಖ್ಯಮಂತ್ರಿಗೆ ಪತ್ರ ಬರೆದು ಒತ್ತಾಯಿಸಿದ್ದು, ವಿಳಂಬ ಮಾಡಿದರೆ ಹಂತ ಹಂತವಾಗಿ ಹೋರಾಟ ರೂಪಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಕರ್ನಾಟಕ ವಿಕಾಸರಂಗದ ಅಧ್ಯಕ್ಷ ವ.ಚ. ಚನ್ನೇಗೌಡ, ಸಂಶೋಧಕ ಆರ್. ಶೇಷಶಾಸ್ತ್ರಿ, ಬಾ.ಹ. ಉಪೇಂದ್ರ, ಲೇಖಕ ಆನಂದ್‌ ರಾಮರಾವ್, ರಫಾಯಲ್‌ರಾಜ್, ಗೋವಿಂದಹಳ್ಳಿ ಕೃಷ್ಣೇಗೌಡ, ಎಂ. ಪುಟ್ಟಸ್ವಾಮಿ ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT