ಮಂಗಳವಾರ, ಜನವರಿ 19, 2021
19 °C

ಸಾವಿರಾರು ಎಕರೆ ಭೂಮಿ ನೀಡಿದರೂ ಕನ್ನಡಿಗರ ಕಡೆಗಣನೆ: ಐಐಎಸ್ಸಿ ವಿರುದ್ಧ ಅಸಮಾಧಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಇಲ್ಲಿನ ಭೂಮಿ ಮತ್ತು ನೀರನ್ನು ಬಳಸಿಕೊಂಡು ಎತ್ತರಕ್ಕೆ ಬೆಳೆ ದಿರುವ ಭಾರತೀಯ ವಿಜ್ಞಾನ ಸಂಸ್ಥೆಯು ನೇಮಕಾತಿಯ ವಿಷಯದಲ್ಲಿ ಕನ್ನಡಿಗರನ್ನು ಕಡೆಗಣಿಸುತ್ತಿರುವುದು ಸರಿಯಲ್ಲ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅಸಮಾಧಾನ ವ್ಯಕ್ತಪಡಿಸಿದರು. 

ಐಐಎಸ್ಸಿ ಜತೆಗೆ ಪ್ರಾಧಿಕಾರವು ಹಮ್ಮಿಕೊಂಡಿದ್ದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತ ನಾಡಿದ ಅವರು, ‘ಕನ್ನಡ ಅನುಷ್ಠಾನದ ವಿಷಯದಲ್ಲಿ ಕೇವಲ ಕಣ್ಣೊರೆಸುವ ತಂತ್ರ ಅನುಸರಿಸಲಾಗುತ್ತಿದೆ. ರಾಜ್ಯ ಸರ್ಕಾರವು ಸಂಸ್ಥೆಗೆ ಈ ಮೊದಲು 440 ಎಕರೆ ನೀಡಿತ್ತು. ಇತ್ತೀಚೆಗೆ ಚಿತ್ರದುರ್ಗದ ಸಮೀಪ 1,500 ಎಕರೆ ಒದಗಿಸಿದೆ. ಇಷ್ಟು ದೊಡ್ಡ ಮಟ್ಟದ ಜಾಗ ನೀಡಿರುವುದು ಕನ್ನಡಿಗರನ್ನು ಕಡೆಗಣಿಸಲಿಕ್ಕಲ್ಲ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು