ಮಂಗಳವಾರ, ಸೆಪ್ಟೆಂಬರ್ 22, 2020
25 °C
ಕನ್ನಡ ಅಭಿವೃದ್ಧಿ ಪ್ರಾಧಿಕಾರ

ರಾಜ್ಯೋತ್ಸವದ ವೇಳೆಗೆ ಆನ್‌ಲೈನ್ ಪರೀಕ್ಷೆಗೆ ಚಾಲನೆ: ಟಿ.ಎಸ್. ನಾಗಾಭರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ರಾಜ್ಯೋತ್ಸವದ ವೇಳೆಗೆ ಕನ್ನಡ ಭಾಷಾ ಕೌಶಲ ಆನ್‍ಲೈನ್ ಪರೀಕ್ಷೆಯ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ, ನಿಗದಿತ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ತಿಳಿಸಿದರು.

ಕನ್ನಡ ಭಾಷಾ ಕೌಶಲ ಆನ್‍ಲೈನ್ ಪರೀಕ್ಷೆ ಯೋಜನೆ ಕುರಿತು ಪ್ರಾಧಿಕಾರವು ತಜ್ಞರೊಂದಿಗೆ ಮಂಗಳವಾರ ಆಯೋಜಿಸಿದ್ದ ಆನ್‍ಲೈನ್ ಸಭೆಯಲ್ಲಿ ಮಾತನಾಡಿದ ಅವರು, ‘ಈ ತಂತ್ರಾಂಶದ ಅಭಿವೃದ್ಧಿಯಿಂದ ಅನಿವಾಸಿ ಕನ್ನಡಿಗರಿಗೂ ಹೆಚ್ಚಿನ ಅನುಕೂಲವಾಗಲಿದೆ. ಉನ್ನತ ಮಟ್ಟದ ಅಧಿಕಾರಿಗಳಿಂದ ಕೆಳಹಂತದ ನೌಕರರು ಸೇರಿದಂತೆ ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಕಲಿಯಬೇಕು ಎನ್ನುವುದು ಆಶಯ.ಪರೀಕ್ಷೆ ಪಾಸು ಮಾಡುವವರಿಗೆ ಪ್ರಮಾಣ ಪತ್ರ ನೀಡಲಾಗುವುದು. ಉದ್ಯೋಗ ಪಡೆಯುವ ಸಂದರ್ಭದಲ್ಲಿ ಕೂಡ ಈ ಪ್ರಮಾಣಪತ್ರ ಸಹಕಾರಿಯಾಗಲಿದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು