ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

23 ಪುಸ್ತಕಗಳ ಲೋಕಾರ್ಪಣೆ ನಾಳೆ

Last Updated 6 ಜುಲೈ 2022, 19:57 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರವು 30 ವರ್ಷಗಳನ್ನು ಪೂರೈಸಿದ ಪ್ರಯುಕ್ತ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಸಂಜೆ 5 ಗಂಟೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಪ್ರಾಧಿಕಾರ ಪ್ರಕಟಿಸಿದ 23 ಪುಸ್ತಕಗಳು ಲೋಕಾರ್ಪಣೆ
ಯಾಗಲಿವೆ.

‘ಕ.ಅ.ಪ್ರಾ 30ರ ಸಮಾರಂಭ’, ‘ಕನ್ನಡ ರಥ- ಕಾಯಕ ಪಥ’ ಹಾಗೂ ‘ಚಿಣ್ಣರ ಸಾಹಿತ್ಯ ಮಾಲೆ’ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರು ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT