‘ದೇಶದ ಯಾವುದೇ ಭಾಗದಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ಅಭ್ಯರ್ಥಿಗಳಿಗೆ ರಾಜ್ಯದಲ್ಲಿ ಉನ್ನತ ವ್ಯಾಸಂಗಕ್ಕೆ ಸರ್ಕಾರವು ಮೀಸಲಾತಿ ಕಲ್ಪಿಸಿದೆ. ಅದರಂತೆ, ಇಲ್ಲಿ ತಮ್ಮ ವ್ಯಾಸಂಗ ಮುಂದುವರಿಸಲು ಬಯಸುವ ಗಡಿನಾಡು, ಹೊರನಾಡು ವಿದ್ಯಾರ್ಥಿಗಳಿಗೆ ಇಲಾಖೆಗಳ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಅವಕಾಶ ಕಲ್ಪಿಸಬೇಕಿದೆ. ಆದರೆ, ಸರ್ಕಾರಿ ಶಿಕ್ಷಣ ಸಂಸ್ಥೆಗಳು ಗಡಿನಾಡು, ಹೊರನಾಡು ಕನ್ನಡಿಗರಿಗೆ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ನಿರಾಕರಣೆ ಮಾಡುತ್ತಿದ್ದು, ವಸತಿ ನಿಲಯ ಸೌಲಭ್ಯ ಒದಗಿಸುವಲ್ಲಿಯೂ ಹಿಂದೇಟು ಹಾಕುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.