ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಕನ್ನಡ ಕಡೆಗಣಿಸಲಾಗುತ್ತಿದೆ ಎಂಬ ಕಾರಣಕ್ಕೆ ಕೆಲ ದಿನಗಳ ಹಿಂದಷ್ಟೇ ಪ್ರಾಧಿಕಾರವು ಕ್ರಿಕೆಟ್ ಸಂಸ್ಥೆಗೆ ನೋಟಿಸ್ ನೀಡಿತ್ತು. ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಸಂಸ್ಥೆ, ‘ಮಹಾರಾಜ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಸಮಾರಂಭದಲ್ಲಿ ಅಚಾತುರ್ಯದಿಂದ ಕನ್ನಡ ಬೋರ್ಡ್ ಇರಲಿಲ್ಲ. ಇದರ ಹಿಂದೆ ಬೇರೆ ಕೆಟ್ಟ ಉದ್ದೇಶವಿಲ್ಲ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲಾಗುವುದು’ ಎಂದು ತಿಳಿಸಿದೆ.