ಶನಿವಾರ, ಆಗಸ್ಟ್ 20, 2022
21 °C

ಸರ್ವಜ್ಞನ ಪ್ರತಿಮೆ ಸ್ಥಾಪನೆ ಬಗ್ಗೆ ಬಿಬಿಎಂಪಿಗೆ ಕನ್ನಡ ಅಭಿವೃದ ಪ್ರಾಧಿಕಾರ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ವಜ್ಞನ ಪ್ರತಿಮೆ ಸ್ಥಾಪನೆ, ರಸ್ತೆಗಳಿಗೆ ಹೆಸರಿಸುವ ಮತ್ತು ತ್ರಿಪದಿ ಫಲಕ ಅಳವಡಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ.

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ವಜ್ಞನ ಹೆಸರಿನಲ್ಲಿ ಯಾವುದೇ ಸ್ಮಾರಕ ಇಲ್ಲ. ಅವರ ಕಂಚಿನ ಪ್ರತಿಮೆ ಸ್ಥಾಪಿಸುವ, ಯಾವುದಾದರೂ ಪ್ರಮುಖ ರಸ್ತೆಗೆ ಅವರ ಹೆಸರಿಡುವ ಕುರಿತು ಮತ್ತು ಉದ್ಯಾನಗಳಲ್ಲಿ ಸರ್ವಜ್ಞನ ತ್ರಿಪದಿ ಫಲಕ ಅಳವಡಿಸುವಂತೆ ದಂಡು ಪ್ರದೇಶ ಕನ್ನಡ ಸಂಘಟನೆಗಳ ಒಕ್ಕೂಟ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದೆ. ಇದನ್ನು ಆಧರಿಸಿ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿರುವ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು, ಕ್ರಮ ಕೈಗೊಂಡು 7 ದಿನಗಳಲ್ಲಿ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು