ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಕ್ಷೇತ್ರದಲ್ಲಿ ಕನ್ನಡಿಗರಿಗೆ ಆದ್ಯತೆ: ಸಚಿವ ಭರವಸೆ

ಸಿಎಂ ಜೊತೆ ಚರ್ಚಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಭರವಸೆ
Last Updated 30 ಸೆಪ್ಟೆಂಬರ್ 2021, 17:39 IST
ಅಕ್ಷರ ಗಾತ್ರ

ಬೆಂಗಳೂರು:‘ಉದ್ಯೋಗ ಕ್ಷೇತ್ರದಲ್ಲಿ ಸ್ಥಳೀಯ ಕನ್ನಡಿಗರಿಗೆ ಆದ್ಯತೆ ದೊರಕಿಸಿಕೊಡಲು ಮುಖ್ಯಮಂತ್ರಿ ಹಾಗೂ ಕಾರ್ಮಿಕ ಇಲಾಖೆಯೊಂದಿಗೆ ಚರ್ಚಿಸಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನಗರದಲ್ಲಿ ಗುರುವಾರ ಹಮ್ಮಿಕೊಂಡ ‘ಬದಲಾದ ಉದ್ಯೋಗ ಪರ್ವ’ ವಿಚಾರಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿರುವಎಲ್ಲ ಸಂಸ್ಥೆಗಳು ಕನ್ನಡಕ್ಕೆ ಮಾನ್ಯತೆ ನೀಡುವ ಜೊತೆಗೆ ಇಲ್ಲಿನ ಯುವಕರಿಗೆ ಆದ್ಯತೆ ನೀಡಬೇಕು. ಈ ಬಗ್ಗೆ ಆಗಬೇಕಾದ ಕಾರ್ಯಗಳ ಬಗ್ಗೆ ಇಲಾಖೆಯುಪರಿಣಾಮಕಾರಿ ನಿರ್ಣಯಗಳನ್ನು ತೆಗೆದುಕೊಳ್ಳಲಿದೆ’ ಎಂದರು.

ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ, ‘ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ (ಐಟಿ, ಬಿಟಿ) ಜೊತೆಗೆಖಾಸಗಿ ವಲಯದಲ್ಲಿಯೂ ಸ್ಥಳೀಯ ಕನ್ನಡಿಗರಿಗೆ ಪ್ರಾತಿನಿಧ್ಯ ಕಲ್ಪಿಸಬೇಕು. ಈ ಬಗ್ಗೆ ಕಾಯ್ದೆ ರೂಪಿಸುವಂತೆ ಪ್ರಾಧಿಕಾರವು ಸತತವಾಗಿ ಒತ್ತಾಯಿಸುತ್ತಿದೆ.ಪ್ರಸ್ತಾಪಿತ ನಿಯಮಾವಳಿಯಲ್ಲಿ 10ನೇ ತರಗತಿವರೆಗೆ ಕನ್ನಡದಲ್ಲಿ ಓದಿ ತೇರ್ಗಡೆಯಾಗಿರಬೇಕು, ರಾಜ್ಯದಲ್ಲಿ 15 ವರ್ಷಗಳು ನೆಲೆಸಿರಬೇಕು,ಸಿ ಮತ್ತು ಡಿ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ 100 ರಷ್ಟು ಪ್ರಾತಿನಿಧ್ಯ ಒದಗಿಸಬೇಕು ಸೇರಿದಂತೆ ವಿವಿಧ ಅಂಶಗಳು ಅಡಕವಾಗಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT