ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ಯಾಮಲಾಗೆ ‘ಹಾಮಾನಾ ಕನ್ನಡ ಜಾಗೃತಿ ಪುಸ್ತಕ ಬಹುಮಾನ’

Last Updated 23 ನವೆಂಬರ್ 2022, 20:28 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಗೆಳೆಯರ ಬಳಗ ನೀಡುವ‘ಹಾಮಾನಾ ಕನ್ನಡ ಜಾಗೃತಿ ಪುಸ್ತಕ ಬಹುಮಾನ’ಕ್ಕೆ ಗಾಯಕಿಶ್ಯಾಮಲಾ ಪ್ರಕಾಶ್ ಅವರ ‘ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ಸಂಗೀತದ ಸಾಹಚರ್ಯ’ ಗ್ರಂಥ ಆಯ್ಕೆಯಾಗಿದೆ.

ಬಹುಮಾನವು ₹4 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪತ್ರಕರ್ತ ಶಶಿಧರ ಹಾಲಾಡಿ ಅವರ ‘ಚಿತ್ತ ಹರಿದತ್ತ’ ಅಂಕಣ ಬರಹ ಮತ್ತು ಜ್ಞಾನಶ್ರೀ (ಲಕ್ಷ್ಮಿಕಾಂತಮ್ಮ) ಅವರ ‘ಭವ್ಯ ಭಾರತದ ವೀರ ರಾಣಿಯರು’ ಸಂಕಲನ ಸಮಾಧಾನಕರ ಬಹುಮಾನಕ್ಕೆ ಭಾಜನವಾಗಿವೆ. ಇದು ₹1,500 ನಗದು ಒಳಗೊಂಡಿದೆ.

ಸುಳ್ಯ ಶಾಲೆಯ ಮಕ್ಕಳ ಬರಹ ಸಂಕಲನ ‘ಅಪ್ರಕಾಶಿತ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ’ ಕೃತಿಯನ್ನು ₹1 ಸಾವಿರ ನಗದು ಒಳ ಗೊಂಡಪ್ರೋತ್ಸಾಹ ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ.

ಡಿ.12ರಂದು ಶೇಷಾದ್ರಿಪುರ ಕಾಲೇಜು ಸಭಾಂಗಣದಲ್ಲಿ ಬಳಗದ ವಾರ್ಷಿಕ ಪ್ರಶಸ್ತಿ ಪ್ರದಾನ, ಕನ್ನಡ ಮಾಧ್ಯಮದ ಮಕ್ಕಳಿಗೆ ಪುರಸ್ಕಾರ ನೀಡುವ ಸಮಾರಂಭ ಹಮ್ಮಿಕೊಳ್ಳಲಾಗಿದೆ. ‘ಹಾಮಾನಾ ಕನ್ನಡ ಜಾಗೃತಿ ಪುಸ್ತಕ ಬಹುಮಾನ’ವನ್ನೂ ಅದೇ ಸಮಾರಂಭದಲ್ಲಿ ಕೊಡಲಾಗುವುದು.

ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ ಹಾಗೂ ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ. ಕೃಷ್ಣ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT