ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತ ಎಂ.ಕೆ. ಭಾಸ್ಕರ್ ರಾವ್ ನಿಧನ

Published 3 ಏಪ್ರಿಲ್ 2024, 5:11 IST
Last Updated 3 ಏಪ್ರಿಲ್ 2024, 5:11 IST
ಅಕ್ಷರ ಗಾತ್ರ

ಬೆಂಗಳೂರು: ಹಿರಿಯ ಪತ್ರಕರ್ತ ಎಂ.ಕೆ. ಭಾಸ್ಕರ್ ರಾವ್ ಅವರು ಬುಧವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭಾಸ್ಕರ್ ರಾವ್ ಚಿಕಿತ್ಸೆ ಫಲಿಸದೇ ನಿಧನರಾದರು ಎಂದು ಕುಟುಂಬದವರು ತಿಳಿಸಿದ್ದಾರೆ.

‘ಪ್ರಜಾವಾಣಿ’ ಪತ್ರಿಕೆಯ ಸಹಾಯಕ ಸಂಪಾದಕರಾಗಿ ನಿವೃತ್ತರಾಗಿದ್ದ ಅವರು ನಿವೃತ್ತಿಯ ನಂತರ ಅಂಕಣಕಾರರಾಗಿ ಗುರುತಿಸಿಕೊಂಡಿದ್ದರು.

ದಿನೇಶ್ ಬಾಬು ನಿರ್ದೇಶನದ ನಟ ಉಪೇಂದ್ರ ಮುಖ್ಯ ಪಾತ್ರದಲ್ಲಿದ್ದ ‘ಹಾಲಿವುಡ್’ ಸಿನಿಮಾ ಸೇರಿದಂತೆ ಕೆಲ ಚಿತ್ರಗಳಲ್ಲಿ ಅಭಿನಯಿಸಿದ್ದ ಎಂ.ಕೆ. ಭಾಸ್ಕರ್ ರಾವ್ ರಂಗಕರ್ಮಿಯಾಗಿಯೂ ಸಕ್ರಿಯರಾಗಿದ್ದರು.

ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ ಬೆಂಗಳೂರಿನ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಜರುಗಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ

ಖಾದ್ರಿ ಶಾಮಣ್ಣ ಪ್ರಶಸ್ತಿ ಸೇರಿದಂತೆ ಮುಂತಾದ ಪುರಸ್ಕಾರಗಳಿಗೆ ಭಾಜನರಾಗಿದ್ದ ಅವರು, 1968ರಲ್ಲಿ ಸಂಯುಕ್ತ ಕರ್ನಾಟಕ ಪತ್ರಿಕೆ ಮೂಲಕ ವೃತ್ತಿ ಆರಂಭಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT