ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕನ್ನಡ ಕೋಗಿಲೆ’: ಆ.3ರಿಂದ ಗ್ರ್ಯಾಂಡ್‌ ಫಿನಾಲೆ ಪ್ರಸಾರ

Last Updated 31 ಜುಲೈ 2019, 19:32 IST
ಅಕ್ಷರ ಗಾತ್ರ

ಬೆಂಗಳೂರು: ‘ಕನ್ನಡ ಕೋಗಿಲೆ’ ರಿಯಾಲಿಟಿ ಶೋನ2ನೇ ಆವೃತ್ತಿಯ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ಆಗಸ್ಟ್‌ 3 ಹಾಗೂ 4ರಂದು ರಾತ್ರಿ 8 ಗಂಟೆಗೆ ‘ಕಲರ್ಸ್‌ ಸೂಪರ್‌’ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಫಿನಾಲೆಯಲ್ಲಿಮೈಸೂರಿನ ಆಲಾಪ್, ಕೊಪ್ಪಳದ ಅರ್ಜುನ್ ಇಟಗಿ, ಉಡುಪಿಯ ಕಲಾವತಿ ದಯಾನಂದ್, ಹಾವೇರಿಯ ಖಾಸಿಂ, ಬೆಂಗಳೂರಿನ ನೀತು ಸುಬ್ರಹ್ಮಣ್ಯಂ ಮತ್ತು ಶಿವಮೊಗ್ಗದ ಪಾರ್ಥ ‘ಕನ್ನಡ ಕೋಗಿಲೆ’ ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿದ್ದಾರೆ.

ಸಾಧು ಕೋಕಿಲ, ಅರ್ಚನಾ ಉಡುಪ ಹಾಗೂ ಚಂದನ್ ಶೆಟ್ಟಿ ತೀರ್ಪುಗಾರರಾಗಿದ್ದು, ಗ್ರ್ಯಾಂಡ್ ಫಿನಾಲೆಯಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್ ವಿಶೇಷ ತೀರ್ಪುಗಾರರಾಗಿದ್ದಾರೆ.

‘ಕಲರ್ಸ್ ಸಮೂಹದ ವಾಹಿನಿಗಳಲ್ಲಿ ಸಂಗೀತದ ಕಾರ್ಯಕ್ರಮ ಬೇಕು ಎಂಬ ವೀಕ್ಷಕರ ಬಹುದಿನಗಳ ಬೇಡಿಕೆಯನ್ನು ‘ಕನ್ನಡ ಕೋಗಿಲೆ’ ಈಡೇರಿಸಿತು. ರಾಜ್ಯದ ನಾನಾ ಭಾಗಗಳಿಂದ ಬೆಳಕಿಗೆ ಬಾರದ ಪ್ರತಿಭೆಗಳನ್ನು ನಮ್ಮ ತಂಡ ಹುಡುಕಿ ತಂದಿದೆ.ಇದು ಕನ್ನಡದ ಅಪ್ರತಿಮ ಸಂಗೀತದ ಕಾರ್ಯಕ್ರಮವಾಗಿ ನೆಲೆಯೂರಿದೆ. ಗ್ರ್ಯಾಂಡ್ ಫಿನಾಲೆಯಲ್ಲಿ ಮನರಂಜನೆಯ ಮಹಾಪೂರವೇ ಇರಲಿದೆ’ ಎನ್ನುತ್ತಾರೆ ವಯಾಕಾಂ 18ನ ಕನ್ನಡ ಕ್ಲಸ್ಟರ್‌ ಬ್ಯುಸಿನೆಸ್ ಹೆಡ್ ಪರಮೇಶ್ವರ ಗುಂಡ್ಕಲ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT