ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯು ಪುಸ್ತಕ ಬಹುಮಾನಕ್ಕೆ 2023ರಲ್ಲಿ ಪ್ರಕಟವಾದ ಚಿತ್ರಕಲೆಗೆ ಸಂಬಂಧಿಸಿದ ಕನ್ನಡ ಪುಸ್ತಕಗಳನ್ನು ಆಹ್ವಾನಿಸಿದೆ.

ಪುಸ್ತಕ ಬಹುಮಾನವು ₹25 ಸಾವಿರ ನಗದು ಒಳಗೊಂಡಿದೆ. 2023ರ ಜ.1ರಿಂದ 2023ರ ಡಿ.31ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟಗೊಂಡ ಪುಸ್ತಕಗಳನ್ನು ಕಳುಹಿಸಬಹುದಾಗಿದೆ. ಪುಸ್ತಕವು ಕನಿಷ್ಠ 100 ಪುಟಗಳನ್ನಾದರೂ ಹೊಂದಿರಬೇಕು. ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ಪುಸ್ತಕದ ನಾಲ್ಕು ಪ್ರತಿಗಳನ್ನು ಉಚಿತವಾಗಿ ಅಕಾಡೆಮಿಗೆ ನೀಡಬೇಕು ಎಂದು ಅಕಾಡೆಮಿ ರಿಜಿಸ್ಟ್ರಾರ್ ಹೇಳಿದ್ದಾರೆ.

ಪುಸ್ತಕಗಳನ್ನು ಅ.30ರೊಳಗೆ ಅಕಾಡೆಮಿ ಕಚೇರಿಗೆ ಖುದ್ದಾಗಿ ಅಥವಾ ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು–580 002 ಈ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು. ಪುಸ್ತಕದ ಮೇಲೆ ಮತ್ತು ಒಳಪುಟದ ಮೇಲೆ, ಪುಸ್ತಕ ಯಾವ ಚಿತ್ರಕಲಾ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಬರೆದಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.