ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡರಂಗೇಗೌಡಗೆ ‘ಕನ್ನಡ ಸಾಹಿತ್ಯ ಸೇವಾ ಪ್ರಶಸ್ತಿ’

Published 13 ಆಗಸ್ಟ್ 2023, 15:54 IST
Last Updated 13 ಆಗಸ್ಟ್ 2023, 15:54 IST
ಅಕ್ಷರ ಗಾತ್ರ

ಬೆಂಗಳೂರು: ಮೈಕೊ ಕನ್ನಡ ಬಳಗದ ವತಿಯಿಂದ ನೀಡಲಾಗುವ ‘ರಾಬರ್ಟ್‌ ಬಾಷ್‌ ಕನ್ನಡ ಸಾಹಿತ್ಯ ಸೇವಾ ಪ್ರಶಸ್ತಿ’ಗೆ ಸಾಹಿತಿ ದೊಡ್ಡರಂಗೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹1 ಲಕ್ಷ ನಗದು ಒಳಗೊಂಡಿದೆ. ಆ. 27ರಂದು ಆನಂದ ರಾವ್ ವೃತ್ತದಲ್ಲಿರುವ ಜಗದ್ಗುರು ರೇಣುಕಾಚಾರ್ಯ ಕಾಲೇಜಿನ ಎಸ್.ಜೆ.ಆರ್.ಸಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಹೃದ್ರೋಗ ತಜ್ಞೆ ಡಾ. ವಿಜಯಲಕ್ಷ್ಮಿ ಬಾಳೆಕುಂದ್ರಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಾಷ್ ವಾಣಿಜ್ಯ ಅಧಿಕಾರಿಗಳಾದ ಎಚ್.ಬಿ. ತೋಂಟೇಶ್, ಕಾರ್ಮಿಕ ಸಂಘದ ಅಧ್ಯಕ್ಷ ವಿ.ಜೆ.ಕೆ. ನಾಯರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT