ಗುರುವಾರ , ಅಕ್ಟೋಬರ್ 1, 2020
21 °C

ಉಷಾಗೆ ‘ಆರಗ ವಿಮರ್ಶಾ ಪ್ರಶಸ್ತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನದ ವತಿಯಿಂದ ನೀಡಲಾಗುವ 'ಸೂ.ವೆಂ.ಆರಗ ವಿಮರ್ಶಾ ಪ್ರಶಸ್ತಿ'ಗೆ ಎಂ.ಉಷಾ ಅವರ 'ಕನ್ನಡ ಮ್ಯಾಕ್‍ಬೆತ್‍ಗಳು' ಕೃತಿ ಆಯ್ಕೆಯಾಗಿದೆ. 

ಪ್ರಶಸ್ತಿ ₹10 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಮುಂದಿನ ದಿನಗಳಲ್ಲಿ ನಡೆಯಲಿರುವಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕೃತಿ ಆಹ್ವಾನ: ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಶಾ. ಬಾಲೂರಾವ್ ಯುವ ಬರಹಗಾರ ಹಾಗೂ ಅನುವಾದ ಪ್ರಶಸ್ತಿಗಳಿಗೆ
ಲೇಖಕರಿಂದ ಕೃತಿಗಳನ್ನು ಆಹ್ವಾನಿಸಲಾಗಿದೆ.

ಪ್ರಶಸ್ತಿಗಳು ತಲಾ ₹25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿವೆ. ಯುವ ಬರಹಗಾರ ಪ್ರಶಸ್ತಿಗೆ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಅನುವಾದ ಪ್ರಶಸ್ತಿಗೆ 2019ರಲ್ಲಿ ಪ್ರಕಟವಾದ ಅನುವಾದ ಕೃತಿಗಳನ್ನು ಸಲ್ಲಿಸಬಹುದು.

ಆಸಕ್ತರು ಸೆಪ್ಟೆಂಬರ್ 30ರೊಳಗೆ ಪುಸ್ತಕದ ಎರಡು ಪ್ರತಿಗಳನ್ನು ಕಚೇರಿಗೆ ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಳಾಸ: ಬಿಎಂಶ್ರೀ ಪ್ರತಿಷ್ಠಾನ, 3ನೇ ಮುಖ್ಯರಸ್ತೆ, ಎನ್.ಆರ್.ಕಾಲೊನಿ.
ಸಂಪರ್ಕ:080-26615877

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.