ಸರ್ಕಾರಿ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆದೇಶ ಹೊರಡಿಸಿರುವುದು ಸ್ವಾಗತಾರ್ಹ. ಆದರೆ, ನಾಮಫಲಕಗಳಲ್ಲಿ ಕನ್ನಡ ಲಿಪಿ ಮಾತ್ರ ಬಳಸದೆ, ಕನ್ನಡ ಭಾಷೆಗೂ ಆದ್ಯತೆ ನೀಡಬೇಕು. ಬಹಳಷ್ಟು ಸಂಚಾರ ಪೊಲೀಸ್ ಸೂಚನಾ ಫಲಕಗಳು ಇಂಗ್ಲಿಷ್‌ನಲ್ಲಿಯೇ ಇವೆ. ಕಾಗುಣಿತ ದೋಷವನ್ನೂ ಕಾಣಬಹುದು ಎಂದು ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.