ಶುಕ್ರವಾರ, ಫೆಬ್ರವರಿ 26, 2021
20 °C

ಕಸಾಪ: ‌‘ಕನ್ನಡ ಕಾಯಕ ದತ್ತಿ ‍ಪ್ರಶಸ್ತಿ’ ಸ್ಥಾಪನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹೊಸದಾಗಿ ‘ಕನ್ನಡ ಕಾಯಕ ದತ್ತಿ ಪ್ರಶಸ್ತಿ’ಯನ್ನು ಸ್ಥಾಪಿಸಲಾಗಿದೆ. ಕನ್ನಡ ಪರ ಹೋರಾಟಗಾರರು, ನಾಡಿನ ಕುರಿತು ಕೃತಿ ರಚಿಸಿದವರು ಹಾಗೂ ಕನ್ನಡ ರಂಗಭೂಮಿ ಕಲಾವಿದರ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತದೆ.

ವ.ಚ. ಚನ್ನೇಗೌಡ ಅವರು ದತ್ತಿ ದಾನಿಗಳಾಗಿದ್ದು, ಅವರು ಪರಿಷತ್ತಿನಲ್ಲಿ ₹ 7.20 ಲಕ್ಷ ದತ್ತಿನಿಧಿ ಸ್ಥಾಪಿಸಿದ್ದಾರೆ. ಈ ಪ್ರಶಸ್ತಿಗೆ ಪ್ರತಿ ವರ್ಷ ಮೂವರನ್ನು ಗುರುತಿಸಿ, ಗೌರವಿಸಲಾಗುತ್ತದೆ. ಪ್ರಶಸ್ತಿಯು ತಲಾ ₹ 10 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.