ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸಾಪದಿಂದ ‘ಕನ್ನಡದ ಧ್ರುವತಾರೆ’ ಕಾರ್ಯಕ್ರಮ: ಮೊದಲ ಅತಿಥಿ ನಟ ರಮೇಶ್ ಅರವಿಂದ್

Published 18 ಆಗಸ್ಟ್ 2023, 0:30 IST
Last Updated 18 ಆಗಸ್ಟ್ 2023, 0:30 IST
ಅಕ್ಷರ ಗಾತ್ರ

ಬೆಂಗಳೂರು: ಸಾಧಕರೊಂದಿಗೆ ಸಂವಾದ ನಡೆಸಲು ‘ಕನ್ನಡದ ಧ್ರುವತಾರೆ’ ಎಂಬ ವಿನೂತನ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ರೂಪಿಸಿದ್ದು, ಮೊದಲ ಅತಿಥಿಯಾಗಿ ಚಲನಚಿತ್ರ ನಟ ರಮೇಶ್ ಅರವಿಂದ್ ಅವರು ಭಾಗವಹಿಸಲಿದ್ದಾರೆ. 

ಮೊದಲ ಕಾರ್ಯಕ್ರಮ ಇದೇ ಶನಿವಾರ ಸಂಜೆ 5 ಗಂಟೆಗೆ ಚಾಮರಾಜಪೇಟೆಯಲ್ಲಿರುವ ತನ್ನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನಡೆಯಲಿದೆ. ಜಯದೇವ ಹೃದ್ರೋಗ  ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.‌ ಮಂಜುನಾಥ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

‘ಕನ್ನಡಿಗರು ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಬೆರಗು ಹುಟ್ಟಿಸುವಂತಹ ಸಾಧನೆ ಮಾಡಿದ್ದಾರೆ. ‘ಕನ್ನಡದ ಧ್ರುವತಾರೆ’ ಕಾರ್ಯಕ್ರಮದ ಮೂಲಕ ವಿವಿಧ ಕ್ಷೇತ್ರದಲ್ಲಿ ಅಗಣಿತ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಲಾಗುತ್ತದೆ. ಸಂವಾದದ ಮೂಲಕ ಸಾಧಕರ ಅನುಭವಗಳನ್ನು ನಾಡಿನ ಜನರಿಗೆ ತಿಳಿಸುವ ಕೆಲಸ ಇದಾಗಿದೆ. ಈ ಕಾರ್ಯಕ್ರಮವನ್ನು ಪ್ರತಿ ತಿಂಗಳು ನಡೆಸಲಾಗುತ್ತದೆ’ ಎಂದು ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT