ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದಲಿಂಗಯ್ಯ, ಪ್ರವೀಣ್ ದತ್ ಸ್ಟೀಫನ್‌ಗೆ ‘ಕಸಾಪ ದತ್ತಿ ಪ್ರಶಸ್ತಿ’

Published 12 ಮಾರ್ಚ್ 2024, 15:38 IST
Last Updated 12 ಮಾರ್ಚ್ 2024, 15:38 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿ’ಗೆ ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ ಹಾಗೂ ಸಂಗೀತ ನಿರ್ದೇಶಕ ಪ್ರವೀಣ್ ದತ್ ಸ್ಟೀಫನ್ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು ತಲಾ ₹10 ಸಾವಿರ ನಗದು ಒಳಗೊಂಡಿದೆ. ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಈ ಪ್ರಶಸ್ತಿಯನ್ನು ಪ್ರತಿ ವರ್ಷ ಕನ್ನಡ ಕ್ರೈಸ್ತ ಸಾಧಕರೊಬ್ಬರು ಹಾಗೂ ಕನ್ನಡ ಪರ ಹೋರಾಟಗಳಲ್ಲಿ ಸಕ್ರಿಯವಾಗಿ ಇರುವ ಒಬ್ಬರಿಗೆ ನೀಡಲಾಗುತ್ತಿದೆ. 

ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ 16ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಅಯೋಜಿಸಲಾಗಿದೆ. ಎಸ್.ಎಂ.ಎಂ.ಐ ಧಾರ್ಮಿಕ ಸಭೆಯ ಕರ್ನಾಟಕ ಪ್ರಾಂತ್ಯಾಧಿಕಾರಿ ಜೆಸ್ಸಿ ಮರ್ಲಿನ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪರಿಷತ್ತಿನ ಅಧ್ಯಕ್ಷರಾದ ಮಹೇಶ ಜೋಶಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಸಾಪ ಪ್ರಕಟಣಾ ವಿಭಾಗದ ಸಂಚಾಲಕ ಎನ್.ಎಸ್.ಶ್ರೀಧರ ಮೂರ್ತಿ ತಿಳಿಸಿದ್ದಾರೆ. 

ಪ್ರವೀಣ್ ದತ್ ಸ್ಟೀಫನ್
ಪ್ರವೀಣ್ ದತ್ ಸ್ಟೀಫನ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT