ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಮಾಗೆ ‘ಕಸಾಪ ದತ್ತಿ ‍ಪ್ರಶಸ್ತಿ’

Published 13 ಮಾರ್ಚ್ 2024, 15:56 IST
Last Updated 13 ಮಾರ್ಚ್ 2024, 15:56 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಡಾ.ಎಚ್.ವಿಶ್ವನಾಥ್ ಮತ್ತು ಎಂ.ಎಸ್.ಇಂದಿರಾ ದತ್ತಿ ಪ್ರಶಸ್ತಿ’ಗೆ ಲೇಖಕಿ ರಮಾ ಫಣಿ ಭಟ್ ಗೋಪಿ ಆಯ್ಕೆಯಾಗಿದ್ದಾರೆ. 

ಈ ಪ್ರಶಸ್ತಿಯು ₹ 10 ಸಾವಿರ ನಗದು ಒಳಗೊಂಡಿದೆ. ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. 

ಅಂಧ ಬರಹಗಾರರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಎಚ್.ವಿಶ್ವನಾಥ್ ಅವರು ಈ ಪುರಸ್ಕಾರವನ್ನು ಪರಿಷತ್ತಿನಲ್ಲಿ ಸ್ಥಾಪಿಸಿದ್ದಾರೆ. ರಮಾ ಫಣಿ ಭಟ್ ಗೋಪಿ ಅವರ ಬರಹಗಳು ವಿವಿಧ ದಿನ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ‘ಭಾವಲೋಕ’ ಮತ್ತು ‘ಆಕಾಶ ಬುಟ್ಟಿ’ ಅವರ ಪ್ರಕಟಿತ ಕವನ ಸಂಕಲನಗಳಾಗಿವೆ ಎಂದು ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕ ಎನ್.ಎಸ್.ಶ್ರೀಧರ ಮೂರ್ತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT