ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಮಾಹಿತಿ ಹಕ್ಕು ತಜ್ಞ ಜೆ.ಎಂ.ರಾಜಶೇಖರ ದತ್ತಿ’ ಪ್ರಶಸ್ತಿಗೆ ಲೇಖಕ ವೈ.ಜಿ.ಮುರಳೀಧರ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹5 ಸಾವಿರ ನಗದು ಒಳಗೊಂಡಿದೆ. ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಮಾಹಿತಿ ಹಕ್ಕು ಕ್ಷೇತ್ರದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಪಿ.ಮಹೇಶ್ ಅವರು ಈ ದತ್ತಿ ಪ್ರಶಸ್ತಿ ಸ್ಥಾಪಿಸಿದ್ದಾರೆ. ಮಾಹಿತಿ ಹಕ್ಕು ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ.

ಸಾಹಿತಿ, ಹವ್ಯಾಸಿ ಪತ್ರಕರ್ತ ಜೆ.ಎಂ.ರಾಜಶೇಖರ ಅವರು 1,500ಕ್ಕೂ ಹೆಚ್ಚು ಮಾಹಿತಿ ಹಕ್ಕು ಅರ್ಜಿಗಳನ್ನು ಹಾಕಿ, ಆಡಳಿತದ ಸಮರ್ಪಕ ನಿರ್ವಹಣೆಗೆ ಕಾರಣರಾಗಿದ್ದರು. ಅಲ್ಲದೆ, ಮಾಹಿತಿ ಹಕ್ಕಿನ ಕುರಿತು ಅನೇಕ ಕಡೆ ಉಪನ್ಯಾಸಗಳನ್ನು ನೀಡಿ ಜನಜಾಗೃತಿ ಉಂಟು ಮಾಡಿದ್ದರು ಎಂದು ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕ ಎನ್.ಎಸ್.ಶ್ರೀಧರ ಮೂರ್ತಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.