ಕಸಾಪ: ಮನೆ ಮನೆಗೆ ಭೇಟಿ ಅಭಿಯಾನ

ಬೆಂಗಳೂರು: ಹಾವೇರಿಯಲ್ಲಿ ನಡೆಯ ಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಮನೆ ಮನೆಗೆ ಭೇಟಿ ಅಭಿಯಾನ ಹಮ್ಮಿಕೊಂಡಿದ್ದಾರೆ.
‘ಸಾಹಿತ್ಯ ಸಮ್ಮೇಳನವನ್ನು ಪರಿಷತ್ತು ಮತ್ತು ಸರ್ಕಾರ ಮಾತ್ರ ಆಚರಿಸುವುದಲ್ಲ. ಸಮಸ್ತ ಕನ್ನಡಿಗರೂ ಕನ್ನಡಿಗರ ಹಬ್ಬ ಎಂಬ ಭಾವನೆಯಿಂದ ಒಗ್ಗಟ್ಟಿನಿಂದ ಆಚರಿಸಬೇಕು. ಅರ್ಥಪೂರ್ಣ ಗೋ ಷ್ಠಿಗಳು, ಔಚಿತ್ಯಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನುಡಿಜಾತ್ರೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಬೇಕು. ಹೀಗಾಗಿ, ಎಲ್ಲರ ಸಲಹೆ-ಸೂಚನೆಗಳನ್ನು ಸ್ವೀಕರಿಸಲು, ಸಹಕಾರವನ್ನು ಪಡೆಯಲು ಪರಿ ಷತ್ತಿನ ಅಧ್ಯಕ್ಷರು ರಾಜ್ಯದಾದ್ಯಂತ ಜನ ಸಾಮಾನ್ಯರ, ಗಣ್ಯರ, ವಿವಿಧ ಕ್ಷೇತ್ರಗಳಲ್ಲಿ ಸಾಧನಗೈದ ಮಹನೀಯರುಗಳ ಮನೆಗೆ ಭೇಟಿ ನೀಡಲಿದ್ದಾರೆ’ ಎಂದು ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗಶೆಟ್ಟಿ ಅವರು ತಿಳಿಸಿದ್ದಾರೆ.
‘ಕನ್ನಡಾಭಿಮಾನಿಗಳು ತಮ್ಮ ಮನೆಯಲ್ಲಿ ಪರಿಷತ್ತಿನ ಅಧ್ಯಕ್ಷರನ್ನು ಭೇಟಿಯಾಗಲು ಜೂ.30ರೊಳಗೆ ಪರಿಷತ್ತಿನಲ್ಲಿ ವಿಳಾಸ ಸಹಿತ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು’ ಎಂದು ಪ್ರಕಟಣೆ ತಿಳಿಸಿದೆ.
ಸಂಪರ್ಕ ಸಂಖ್ಯೆ: 080-26612991, 26623584
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.