ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸಾಪ: 53 ದತ್ತಿ ಪ್ರಶಸ್ತಿಗಳಿಗೆ ಪುಸ್ತಕ ಆಹ್ವಾನ

Published 27 ಏಪ್ರಿಲ್ 2024, 15:21 IST
Last Updated 27 ಏಪ್ರಿಲ್ 2024, 15:21 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) 53 ವಿವಿಧ ದತ್ತಿ ಪ್ರಶಸ್ತಿಗಳಿಗೆ ಪುಸ್ತಕಗಳನ್ನು ಆಹ್ವಾನಿಸಿದೆ.

2023ರ ಜನವರಿ 1ರಿಂದ ಡಿಸೆಂಬರ್ 31ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿ ಕೊಡಬಹುದಾಗಿದೆ. ಪ್ರಶಸ್ತಿಗಳು ₹10 ಸಾವಿರದವರೆಗೆ ನಗದು ಬಹುಮಾನ ಹೊಂದಿವೆ. 

ಬಿಸಲೇರಿ ಜಯಣ್ಣ ಮತ್ತು ಬಿಸಲೇರಿ ಬ್ರದರ್ಸ್‌ ದತ್ತಿ, ವಿ. ಗೌರಮ್ಮ ಗಂಗಾಧರಯ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಶಸ್ತಿ, ಭಾರತಿ ಮೋಹನ ಕೋಟಿ ದತ್ತಿ, ಹೊಳಲ್ಕೆರೆ ಪದ್ಮಾವತಮ್ಮ ಶ್ರೀಪಾಲಶೆಟ್ಟಿ ಡಾ. ಮದನಕೇಸರಿ ಜೈನ ದತ್ತಿ ಹಾಗೂ ಪೂಜ್ಯ ಸ್ವಸ್ತಿಶ್ರೀ ದೇವೇಂದ್ರಕೀರ್ತಿ ದತ್ತಿ ಪ್ರಶಸ್ತಿ ತಲಾ ₹ 10 ಸಾವಿರ ನಗದು ಒಳಗೊಂಡಿವೆ. 

ಪ್ರಶಸ್ತಿಗೆ ಪುಸ್ತಕ ಸಲ್ಲಿಸುವವರು ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವವನ್ನು ಕಡ್ಡಾಯವಾಗಿ ಹೊಂದಿರಬೇಕು. ಇಲ್ಲವಾದಲ್ಲಿ ಸದಸ್ಯತ್ವ ಪಡೆದು, ಪುಸ್ತಕ ಕಳುಹಿಸಬಹುದು. ಪರಿಷತ್ತಿನ ಯಾವುದೇ ಪುಸ್ತಕ ಪ್ರಶಸ್ತಿ ಪುರಸ್ಕೃತರು ತಾವು ಪ್ರಶಸ್ತಿ ಪಡೆದ ವಿಭಾಗಕ್ಕೆ ಮೂರು ವರ್ಷ ಅರ್ಜಿ ಸಲ್ಲಿಸುವಂತಿಲ್ಲ. ಪುಸ್ತಕ ದತ್ತಿ ಪುರಸ್ಕಾರ ಬರಹಗಾರರಿಗೆ ಯಾವುದೇ ಪ್ರಕಾರದಲ್ಲಿ ಮೂರು ಸಲ ಪ್ರಶಸ್ತಿ ಬಂದಿದ್ದಲ್ಲಿ ಜೀವಮಾನ ಪೂರ್ತಿ ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ದತ್ತಿ ಪುರಸ್ಕಾರಕ್ಕೆ ಅವರು ಅರ್ಜಿ ಸಲ್ಲಿಸುವಂತಿಲ್ಲ. ಪ್ರತಿ ವಿಭಾಗಕ್ಕೂ ಪ್ರತ್ಯೇಕ ಮೂರು ಪುಸ್ತಗಳನ್ನು ಸಲ್ಲಿಸಬೇಕು. ಪ್ರಶಸ್ತಿಯ ಪರಿಶೀಲನೆಗೆ ಕಳುಹಿಸಿರುವ ಪುಸ್ತಕಗಳನ್ನು ಹಿಂದಿರುಗಿಸುವುದಿಲ್ಲ ಎಂದು ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

ಪುಸ್ತಕಗಳ ಪ್ರತಿಗಳು ಯಾವ ದತ್ತಿಗೆ ಎನ್ನುವುದನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ಬರೆದು, ಮೇ 31ರೊಳಗೆ ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-560 018 ಈ ವಿಳಾಸಕ್ಕೆ ಕಳುಹಿಸಬೇಕು. ವಿವರಕ್ಕೆ www.kasapa.inಗೆ ಭೇಟಿ ನೀಡಬಹುದು ಎಂದು ಹೇಳಿದ್ದಾರೆ.

ಸಂಪರ್ಕ ಸಂಖ್ಯೆ: 080 26612991 ಅಥವಾ 26623584

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT