ಮಂಗಳವಾರ, ಅಕ್ಟೋಬರ್ 20, 2020
23 °C

ಕಸಾಪ ಚುನಾವಣೆ: ಸರ್ಕಾರಕ್ಕೆ ಪತ್ರ– ಮನು ಬಳಿಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಮುಂದಿನ ವರ್ಷದ ಮಾರ್ಚ್‌ಗೆ ಐದು ವರ್ಷಗಳ ಅಧಿಕಾರದ ಅವಧಿ ಮುಕ್ತಾಯವಾಗುವ ಕಾರಣ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ಮೂರು ತಿಂಗಳ ಮೊದಲು ಪತ್ರ ಬರೆಯುತ್ತೇನೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮನು ಬಳಿಗಾರ ತಿಳಿಸಿದ್ದಾರೆ.

ಅಧ್ಯಕ್ಷರ ಚುನಾವಣೆಗೆ ಇದ್ದ ಕಾನೂನು ತೊಡಕು ನಿವಾರಣೆಯಾದ ಬೆನ್ನಲ್ಲಿಯೇ, ಪರಿಷತ್ತಿನ ಚುನಾವಣೆಗೆ ಹಾಲಿ ಕಾರ್ಯಕಾರಿ ಸಮಿತಿ ಅವಕಾಶ ಮಾಡಿಕೊಡಬೇಕು ಎಂದು ಸಾಹಿತಿಗಳು ಹಾಗೂ ಚಿಂತಕರು ಆಗ್ರಹಿಸಿದ್ದರು.

ಈ ಬಗ್ಗೆ ‍ಪ್ರತಿಕ್ರಿಯೆ ನೀಡಿರುವ ಮನು ಬಳಿಗಾರ, ‘2021ರ ಮಾರ್ಚ್‌ 3ಕ್ಕೆ ನಮ್ಮ ಕಾರ್ಯಕಾರಿ ಸಮಿತಿಯ ಅಧಿಕಾರದ ಅವಧಿ ಮುಕ್ತಾಯವಾಗಲಿದೆ. ನಿಬಂಧನೆಯ ಪ್ರಕಾರ ಮುಂದಿನ ಕಾರ್ಯಕಾರಿ ಸಮಿತಿ ಅಸ್ತಿತ್ವಕ್ಕೆ ಬರುವವರೆಗೂ ಈಗಿನ ಕಾರ್ಯಕಾರಿ ಸಮಿತಿಯೇ ಮುಂದುವರಿಯಲಿದೆ. ಅವಧಿ ಮುಗಿಯುವ ಮೂರು ತಿಂಗಳ ಮೊದಲು ಸರ್ಕಾರಕ್ಕೆ ಚುನಾವಣೆ ನಡೆಸುವ ಸಂಬಂಧ ಪತ್ರ ಬರೆಯಬೇಕು. ಅದರ ಅನುಸಾರ ಡಿಸೆಂಬರ್ 3ಕ್ಕಿಂತ ಮೊದಲು ಸರ್ಕಾರಕ್ಕೆ ಪತ್ರ ಬರೆಯುತ್ತೇನೆ’ ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು