ಶನಿವಾರ, ಜುಲೈ 2, 2022
25 °C

ಕೆನಡಾದ ಚಂದ್ರ ಆರ್ಯಗೆ ಕಸಾಪ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮುಂಬರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸುವಂತೆ ಕೆನಡಾ ಸಂಸತ್ತಿನಲ್ಲಿ ಕನ್ನಡ ಭಾಷಣ ಮಾಡಿದ ಚಂದ್ರ ಆರ್ಯ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಅವರು ಮನವಿ ಮಾಡಿದ್ದಾರೆ. 

‘ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನದ ಸಿದ್ಧತೆ ಕೈಗೊಳ್ಳಲಾಗಿದೆ. 3 ದಿನಗಳ ನುಡಿಜಾತ್ರೆಯ ಮೊದಲ ದಿನತಾವು ವಿಶೇಷ ಅಥಿತಿಯಾಗಿ ಭಾಗವಹಿಸಿ, ಸಮಾರಂಭದ ಘನತೆ ಹೆಚ್ಚಿಸಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ. ‘ಕೆನಡಾದಲ್ಲಿ ತಮ್ಮ ಮಾರ್ಗದರ್ಶನದಲ್ಲಿ ಪರಿಷತ್ತಿನ ಘಟಕ ಸ್ಥಾಪಿಸಲು ಉತ್ಸುಕರಾಗಿದ್ದೇವೆ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು