ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಶಾಲೆ ಉಳಿವಿಗೆ ಕಾನೂನು ಹೋರಾಟ: ಮಹೇಶ ಜೋಶಿ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಚ್ಚರಿಕೆ
Last Updated 19 ಆಗಸ್ಟ್ 2022, 22:21 IST
ಅಕ್ಷರ ಗಾತ್ರ

ಬೆಂಗಳೂರು: ‘ಚಿಕ್ಕಪೇಟೆ ಸರ್ಕಾರಿ ಪ್ರೌಢಶಾಲೆಯ ಜಾಗವನ್ನು ಜಿಲ್ಲಾಡಳಿತ ಮಾರಾಟಕ್ಕೆ ಇಟ್ಟಿರುವ ಕ್ರಮ ಅಕ್ಷಮ್ಯ. ಕನ್ನಡ ಶಾಲೆಗಳ ಉಳಿವಿಗೆ ನ್ಯಾಯಾಲಯದ ಮೆಟ್ಟಿಲು ಹತ್ತಲೂ ಸಿದ್ಧವಿದ್ದೇವೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿತಿಳಿಸಿದ್ದಾರೆ.

‘ಕನ್ನಡ ಶಾಲೆಗಳನ್ನು ಉಳಿಸಿ ಕನ್ನಡ ಭಾಷೆಯನ್ನು ಬೆಳೆಸಬೇಕು ಎನ್ನುವ ಮೂಲ ಧ್ಯೇಯವನ್ನು ಹೊಂದಿರುವ ಪರಿಷತ್ತು, ಕನ್ನಡ ಶಾಲೆಗಳ ಮುಚ್ಚುವಿಕೆಯನ್ನು ಸಹಿಸುವುದಿಲ್ಲ. ಸರ್ಕಾರವು ಕನ್ನಡ ಶಾಲೆಗಳ ಬಗ್ಗೆ ಅಸಡ್ಡೆ ತೋರುವುದು ಆಗಾಗ ಕಂಡುಬರುತ್ತಿದೆ. ಚಿಕ್ಕಪೇಟೆಯಲ್ಲಿ 1945ರಲ್ಲಿ ಆರಂಭವಾದ ಸರ್ಕಾರಿ ಪ್ರೌಢಶಾಲೆಯನ್ನು ಶಿಕ್ಷಣ ಇಲಾಖೆಯ ತಕರಾರಿನ ಮಧ್ಯೆಯೂ ಜಿಲ್ಲಾಡಳಿತ ಮುಚ್ಚಲು ಹೊರಟಿರುವುದು ಅಕ್ಷಮ್ಯ. ಸ್ವಾತಂತ್ರ್ಯಪೂರ್ವದ ಶಾಲೆಯನ್ನು ಕಟ್ಟಡ ಸಮೇತ ಮಾರಾಟ ಮಾಡಿ, ಪರಭಾರೆ ಮಾಡಿದ್ದನ್ನು ಯಾವೊಬ್ಬ ಕನ್ನಡಿಗನೂ ಸಹಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

‘ಅವಶ್ಯ ಬಿದ್ದರೆ ಪರಿಷತ್ತು ಕನ್ನಡ ಶಾಲೆಗಳ ಉಳಿವಿಗಾಗಿನಿವೃತ್ತ ನ್ಯಾಯಾಧೀಶರ ಸಲಹೆ ಪಡೆದು ಕಾನೂನು ಹೋರಾಟ ನಡೆಸಲಿದೆ.ಕನ್ನಡವನ್ನು ಉಳಿಸಿ ಬೆಳೆಸಬೇಕಾದರೆ ಕನ್ನಡ ಶಾಲೆಗಳನ್ನು ಉಳಿಸಿಕೊಳ್ಳುವುದು ಮುಖ್ಯ. ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗುವುದು ಅನಿವಾರ್ಯವಾಗಲಿದೆ’ ಎಂದುಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT