ಭಾನುವಾರ, ಜುಲೈ 25, 2021
22 °C

ಕಾಪು ಸಿದ್ದಲಿಂಗಸ್ವಾಮಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾಪು ಸಿದ್ಧಲಿಂಗಸ್ವಾಮಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸದ್ಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರುತಿ ಅವರ ನೇಮಕಾತಿಯನ್ನು ಹಿಂಪಡೆದು, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನವರಾದ ಸಿದ್ಧಲಿಂಗಸ್ವಾಮಿ ಅವರನ್ನು ನೇಮಿಸಲಾಗಿದೆ.

ಕಾಪು ಸಿದ್ದಲಿಂಗಸ್ವಾಮಿ ಬಹಳ ವರ್ಷ ಯಡಿಯೂರಪ್ಪ ಅವರಿಗೆ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದರು. ಯಡಿಯೂರಪ್ಪ ಅವರು ಕೆ.ಜೆ.ಪಿ ಮಾಡಿದಾಗ ವರುಣಾಕ್ಷೇತ್ರದಿಂದ ಸಿದ್ದರಾಮಯ್ಯ ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಿದ್ದರು. ಪಕ್ಷಕ್ಕಾಗಿ ಕೆಲಸ ಮಾಡಿದ ಶೃತಿ ಅವರನ್ನು ತೆಗೆದು, ಸಿದ್ದಲಿಂಗಸ್ವಾಮಿ ಅವರನ್ನು ನೇಮಿಸಿದ್ದು, ಪಕ್ಷದ ವಲಯದಲ್ಲಿ ಸಾಕಷ್ಟು ಟೀಕೆಗೆ ಕಾರಣವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು