ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಕರಗ ಮಹೋತ್ಸವ: ₹ 4.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Published 28 ಏಪ್ರಿಲ್ 2024, 0:32 IST
Last Updated 28 ಏಪ್ರಿಲ್ 2024, 0:32 IST
ಅಕ್ಷರ ಗಾತ್ರ

ಬೆಂಗಳೂರು: ತಿಗಳರಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಜರುಗಿದ್ದ ಕರಗ ಮಹೋತ್ಸವದ ಮೆರವಣಿಗೆ ವೀಕ್ಷಿಸಲು ಹೋಗಿದ್ದ ಮಹಿಳೆಯೊಬ್ಬರ ಚಿನ್ನಾಭರಣ ಕಳುವಾಗಿದ್ದು, ಈ ಸಂಬಂಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಸಂತ್ರಸ್ತ ಮಹಿಳೆಯ ಪತಿ ಕಳ್ಳತನದ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಚಿಕ್ಕಪೇಟೆಯ ದಂಪತಿ, ಏಪ್ರಿಲ್ 23ರಂದು ರಾತ್ರಿ ಕರಗ ಮಹೋತ್ಸವದ ಮೆರವಣಿಗೆ ನೋಡಲು ಹೋಗಿದ್ದರು. ದೇವಸ್ಥಾನದ ಆವರಣದಲ್ಲಿ ಉಂಟಾಗಿದ್ದ ನೂಕುನುಗ್ಗಲಿನಲ್ಲಿ ಸಿಲುಕಿದ್ದರು. ಇದೇ ಸಂದರ್ಭದಲ್ಲಿಯೇ ಚಿನ್ನಾಭರಣ ಕಳ್ಳತನವಾಗಿರುವುದಾಗಿ ದೂರುದಾರರು ಹೇಳುತ್ತಿದ್ದಾರೆ’ ಎಂದು ತಿಳಿಸಿದರು.

‘₹ 4.50 ಲಕ್ಷ ಮೌಲ್ಯದ ಎರಡು ಚಿನ್ನದ ಸರಗಳು ಕಳ್ಳತನ ಆಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT