ಬೆಂಗಳೂರು:ಕನ್ನಡ ಕರಾವಳಿ ವೇದಿಕೆ ವತಿಯಿಂದ ಆಳ್ವಾಸ್ ಎಜುಕೇಶನ್ ಫೌಂಡೇಷನ್ ಮುಖ್ಯಸ್ಥ ಡಾ.ಎಂ. ಮೋಹನ್ ಆಳ್ವ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಕೆ.ರತ್ನಪ್ರಭಾ ಅವರಿಗೆ ‘ಕರಾವಳಿ ಸಿರಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
‘ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ‘ಸಮಾಜದಲ್ಲಿ ಉತ್ತಮ ಕೆಲಸ ಹಾಗೂ ಸಾಧನೆ ಮಾಡಿದವರಿಗೆ ಇಂತಹ ಗೌರವ ಸನ್ಮಾನಗಳು ಸಲ್ಲಬೇಕು’ ಎಂದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ, ‘ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿಕನ್ನಡ ಕರಾವಳಿ ವೇದಿಕೆ ಸಂಸ್ಥೆ ಶ್ರಮಿಸುತ್ತಿದೆ’ ಎಂದು ಶ್ಲಾಘಿಸಿದರು.