ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂವಿಧಾನಿಕ ಮಾನ್ಯತೆ ಕೊಡದ ಕಾಂಗ್ರೆಸ್: ಬಿ.ವೈ. ವಿಜಯೇಂದ್ರ

ಬೆಂಗಳೂರು ಉತ್ತರ ಜಿಲ್ಲೆಯ ಹಿಂದುಳಿದ ವರ್ಗಗಳ ಸಮಾವೇಶ
Last Updated 6 ಮಾರ್ಚ್ 2023, 20:05 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ‘ದೇಶದಲ್ಲಿ ಕಾಂಗ್ರೆಸ್‌ ಹಲವು ವರ್ಷಗಳ ಕಾಲ ಆಡಳಿತ ನಡೆಸಿದ್ದರೂ ಹಿಂದುಳಿದ ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆ ಕೊಟ್ಟಿರಲಿಲ್ಲ. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆ ಕಲ್ಪಿಸಿದೆ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಬಾಗಲಗುಂಟೆಯ ಎಂ.ಇ.ಐ ಮೈದಾನದಲ್ಲಿ ಮಾಜಿ ಶಾಸಕ ಎಸ್. ಮುನಿರಾಜು ನೇತೃತ್ವದಲ್ಲಿ ಆಯೋಜಿಸಿದ್ದ ಬೆಂಗಳೂರು ಉತ್ತರ ಜಿಲ್ಲೆ ಒಬಿಸಿ ಸಮಾವೇಶದಲ್ಲಿ ಮಾತನಾಡಿದರು. 'ಹಿಂದುಳಿದ ವರ್ಗಗಳ ಅಭಿವೃದ್ಧಿಯಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಬಿ.ಎಸ್. ಯಡಿಯೂರಪ್ಪ ಅವರು ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬಂತೆ ಸಾಮಾಜಿಕ ನ್ಯಾಯ ಕಲ್ಪಿಸಿದರು ಎಂದರು.

ರಾಜ್ಯ ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ. ನರೇಂದ್ರಬಾಬು ಮಾತನಾಡಿ, ‘ರಾಷ್ಟ್ರ, ರಾಜ್ಯದಲ್ಲಿ ಅಭಿವೃದ್ಧಿಗೆ ಹಲವಾರು ಯೋಜನೆ ತರುವದರ ಮೂಲಕ ಹಿಂದುಳಿದ ಸಮುದಾಯಗಳಿಗೆ ಅಭಿವೃದ್ಧಿ ನಿಗಮಗಳನ್ನು ಮಾಡಿ ಸಮಾಜ ಎತ್ತುವ ಕೆಲಸ ಮಾಡಿರುವುದು ಬಿಜೆಪಿ ಸರ್ಕಾರ’ ಎಂದರು. ಮಾಜಿ ಶಾಸಕ ಎಸ್. ಮುನಿರಾಜು ಮಾತನಾಡಿ, ‘ದಾಸರಹಳ್ಳಿ ಕ್ಷೇತ್ರದಲ್ಲಿ 2 ಬಾರಿ ಪಾಲಿಕೆ ಚುನಾವಣೆಗಳಲ್ಲಿ ಕುರುಬ, ಯಾದವ ಸೇರಿ ಒಬಿಸಿ ಸಮಾಜದ 4 ಅಭ್ಯರ್ಥಿಗಳಿಗೆ ಅವಕಾಶ ಕೊಡಲಾಗಿತ್ತು. ಅದರಲ್ಲೂ ಮಹಿಳೆಯರಿಗೆ ಆದ್ಯತೆ ನೀಡಲಾಗಿತ್ತು’ ಎಂದರು.

ಸಂಸದರಾದ ಡಿ.ವಿ. ಸದಾನಂದಗೌಡ, ಪಿ.ಸಿ. ಮೋಹನ್, ರಾಜ್ಯಸಭಾ ಸದಸ್ಯ ಜಗ್ಗೇಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ. ಮರಿಸ್ವಾಮಿ, ದಾಸರಹಳ್ಳಿ ಮಂಡಲ ಅಧ್ಯಕ್ಷ ಎನ್.ಲೋಕೇಶ್, ದಾಸರಹಳ್ಳಿ ಬಿಜೆಪಿ ಉಸ್ತುವಾರಿ ಉಮೇಶ್ ಶೆಟ್ಟಿ, ನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾರಾಯಣಸ್ವಾಮಿ, ಕ್ಷೇತ್ರದ ಒಬಿಸಿ ಅಧ್ಯಕ್ಷ ಬಿ.ಎಂ.ಮಂಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT