ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಲಮಂಗಲದಲ್ಲಿ ಕಾಂಗ್ರೆಸ್‌ಗೆ ಭಾರಿ ಅಂತರದ ಗೆಲುವು

Published 13 ಮೇ 2023, 19:35 IST
Last Updated 13 ಮೇ 2023, 19:35 IST
ಅಕ್ಷರ ಗಾತ್ರ

ನೆಲಮಂಗಲ: ಕಾಂಗ್ರೆಸ್‌ ಅಭ್ಯರ್ಥಿ ಎನ್‌.ಶ್ರೀನಿವಾಸ್‌ ಅವರು 84,229 ಮತಗಳನ್ನು ಪಡೆದು ಜೆಡಿಎಸ್‌ ಶಾಸಕರಾಗಿದ್ದ ಡಾ.ಕೆ.ಶ್ರೀನಿವಾಸಮೂರ್ತಿ ಅವರ ವಿರುದ್ಧ 31,978 ಮತಗಳ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ.

ಜೆಡಿಎಸ್‌ನ ಡಾ.ಕೆ.ಶ್ರೀನಿವಾಸಮೂರ್ತಿ ಅವರು 52,251 ಮತಗಳನ್ನು ಪಡೆದಿದ್ದಾರೆ. ಕಳೆದ ಎರಡು ಬಾರಿ ಶಾಸಕರಾಗಿದ್ದ ಇವರು ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದ್ದರು.

ಬಿಜೆಪಿ ಅಭ್ಯರ್ಥಿ ಸಪ್ತಗಿರಿ ಶಂಕರ್‌ ನಾಯಕ್‌ ಅವರು 30,582 ಮತಗಳಿಗೆ ತೃಪ್ತರಾಗಿದ್ದಾರೆ. ಚುನಾವಣೆ ಇನ್ನೇನು ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್‌ನಿಂದ ಬಿಜೆಪಿಗೆ ಸಪ್ತಗಿರಿ ಬಂದಿದ್ದರು. ಉಳಿದ ಪಕ್ಷಗಳು ಹಾಗೂ ಪಕ್ಷೇತರರು 2000 ಮತಗಳ ಗಡಿ ದಾಟಿಲ್ಲ. 979 ನೋಟಾ ಮತಗಳು ಚಲಾವಣೆಯಾಗಿವೆ. ಕಾಂಗ್ರೆಸ್‌ ಕಾರ್ಯಕರ್ತರು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಎನ್‌.ಶ್ರೀನಿವಾಸ್‌
ಎನ್‌.ಶ್ರೀನಿವಾಸ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT