ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

6.5 ಎಕರೆ ಸರ್ಕಾರಿ ಭೂಮಿ ಖಾಸಗಿಯವರ ಪಾಲು: ಕೃಷ್ಣ ಬೈರೇಗೌಡ

ವಿಧಾನಸಭೆಯಲ್ಲಿ ಪ್ರಸ್ತಾಪ
Last Updated 24 ಡಿಸೆಂಬರ್ 2021, 20:24 IST
ಅಕ್ಷರ ಗಾತ್ರ

ಬೆಳಗಾವಿ: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆ ಪಕ್ಕದಲ್ಲಿರುವ 6.5 ಎಕರೆ ಸರ್ಕಾರಿ ಭೂಮಿಯನ್ನು ಖಾಸಗಿ ವ್ಯಕ್ತಿಗಳು ವಶಕ್ಕೆ ಪಡೆದು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್‌ನ ಸದಸ್ಯ ಕೃಷ್ಣ ಬೈರೇಗೌಡ ತಿಳಿಸಿದರು.

ವಿಧಾನಸಭೆಯಲ್ಲಿ ಶುಕ್ರವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ’ಈ ಜಮೀನು ಮುಖ್ಯಮಂತ್ರಿಯಾಗಿದ್ದ ದಿವಂಗತ ಆರ್‌. ಗುಂಡೂರಾವ್‌ ಅವರ ವಶದಲ್ಲಿತ್ತು. ಸರ್ಕಾರಿ ಭೂಮಿ ಎಂಬ ಕಾರಣಕ್ಕೆ ಬಳಿಕ ಅದನ್ನು ವಶಕ್ಕೆ ಪಡೆದಿತ್ತು. ಯಲಹಂಕದ ಹಿಂದಿನ ತಹಶೀಲ್ದಾರ್‌ ನಕಲಿ ದಾಖಲೆಗಳನ್ನು ಸೃಷ್ಟಿಸಿ ತಮಗೆ ಬೇಕಾದ ಹಾಗೆ ವರದಿ ಕೊಟ್ಟಿದ್ದಾರೆ. ಈ ಮೂಲಕ ಭೂ ಕಬಳಿಕೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಇದು ಹತ್ತಾರು ಕೋಟಿ ಬೆಲೆಬಾಳುವ ಜಮೀನು. ಮೂರು ದಿನಗಳ ಹಿಂದೆ ಕೆಲವು ವ್ಯಕ್ತಿಗಳು ಈ ಜಾಗವನ್ನು ತಮ್ಮ ಸ್ವಾಧೀನಕ್ಕೆ ಪಡೆದುಕೊಂಡು ಮಚ್ಚು ಲಾಂಗ್‌ ಹಿಡಿದುಕೊಂಡು ಸ್ಥಳೀಯ ಜನರಿಗೆ ಬೆದರಿಕೆ ಹಾಕಿದ್ದಾರೆ. ಈ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ‘ ಎಂದು ಗಮನ ಸೆಳೆದರು.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ’ಕಂದಾಯ ಸಚಿವರು ಇದಕ್ಕೆ ಉತ್ತರ ನೀಡಲಿದ್ದಾರೆ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT