ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಮೂಲಸೌಕರ್ಯಕ್ಕೆ ₹4 ಸಾವಿರ ಕೋಟಿ ಬೇಕು

ವಿಧಾನಸಭೆಯಲ್ಲಿ ಸಚಿವ ಸುರೇಶ್‌ ಕುಮಾರ್ ಹೇಳಿಕೆ
Last Updated 12 ಮಾರ್ಚ್ 2020, 22:20 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ₹4 ಸಾವಿರ ಕೋಟಿ ಅಗತ್ಯ ಇದೆ’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಬಂಡೆಪ್ಪ ಕಾಶೆಂಪೂರ ಪ್ರಶ್ನೆಗೆ ಉತ್ತರಿಸಿದ ಅವರು, ‘ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಸಾಮಾಜಿಕ ಹೊಣೆಗಾರಿಕೆ ನಿಧಿಯಿಂದ ನೆರವು ನೀಡಲು ಕಾರ್ಪೊರೇಟ್‌ ಕಂಪನಿಗಳು ಮುಂದೆ ಬಂದಿದೆ. ಈ ಕಂಪನಿಗಳು ಬೆಂಗಳೂರಿನ ಶಾಲೆಗಳಿಗಷ್ಟೇ ನೆರವು ನೀಡಲಿವೆ. ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಅನುದಾನ ಬಳಸಿ ಶಾಲೆಗಳ ಅಭಿವೃದ್ಧಿ ಮಾಡಲಾಗುವುದು’ ಎಂದು ಭರವಸೆ ನೀಡಿದರು.

ಕಾಂಗ್ರೆಸ್‌ನ ಎಚ್‌.ಕೆ.‍ಪಾಟೀಲ, ‘ಶಾಲೆಗಳ ನಿರ್ವಹಣೆ ಹೊಣೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆಗೆ ನೀಡಿ. ಗ್ರಾಮ ಪಂಚಾಯಿತಿ ಮೂಲಕ ನಿರ್ವಹಣೆ ಮಾಡಬಹುದು’ ಎಂದು ಸಲಹೆ ನೀಡಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ನಿರ್ವಹಣೆ ಮಾಡದಿದ್ದರೆ ಶೌಚಾಲಯಗಳ ಕಟ್ಟಿಯೂ ಪ್ರಯೋಜನ ಇಲ್ಲ. ಈ ಹಿಂದೆ ನಿರ್ಮಿಸಿದ್ದ ಅನೇಕ ಶೌಚಾಲಯಗಳು ನಿರ್ವಹಣೆ ಕೊರತೆಯಿಂದ ಹಾಳಾಗಿವೆ’ ಎಂದರು.

‘ಶೌಚಾಲಯಗಳ ನಿರ್ವಹಣೆ ಹೊಣೆಯನ್ನು ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿಗಳಿಗೆ ಹಾಗೂ ಪಟ್ಟಣ ಪ್ರದೇಶದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನೀಡಲಾಗುವುದು’ ಎಂದು ಸುರೇಶ್‌ ಕುಮಾರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT