ಬೆಂಗಳೂರು: ‘ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ನಟ ಕಮಲ್ ಹಾಸನ್ ಅವರು ಕ್ಷಮೆ ಕೇಳಲೇ ಬೇಕು. ಇಲ್ಲವಾದಲ್ಲಿ ಕನ್ನಡ ಪರ ಸಂಘಟನೆಗಳ ಜತೆಗೆ ಚರ್ಚಿಸಿ, ಕರ್ನಾಟಕ ಬಂದ್ಗೆ ಕರೆ ನೀಡಲಾಗುವುದು’ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಿ ಸಾಧ್ಯವಿಲ್ಲ. ಕಮಲ್ ಹಾಸನ್ ಕನ್ನಡದ ಮುಂದೆ ಸಣ್ಣ ವ್ಯಕ್ತಿ. ಅವರು ಕನ್ನಡದ ಬಗ್ಗೆ ಅನಗತ್ಯವಾಗಿ ಮಾತನಾಡಿದ್ದಾರೆ. ಅವರು ಕ್ಷಮೆ ಕೇಳುವವರೆಗೂ ಹೋರಾಟ ಮಾಡಲಾಗುವುದು. ಅವರ ಸಿನಿಮಾ ರಾಜ್ಯದಲ್ಲಿ ಬಿಡುಗಡೆಯಾಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಅವರು ಕ್ಷಮೆ ಕೇಳದಿದ್ದರೆ, ಅವರ ಸಿನಿಮಾ ರಾಜ್ಯದಲ್ಲಿ ಬಿಡುಗಡೆಯಾದರೆ ಕರ್ನಾಟಕ ಬಂದ್ ಮಾಡಲಾಗುವುದು’ ಎಂದು ಹೇಳಿದರು.

‘ಕಮಲ್ ಹಾಸನ್ ಉದ್ಧಟತನ ತೋರುತ್ತಿದ್ದಾರೆ. ಅವರನ್ನು ಕರ್ನಾಟಕದಿಂದ ಬಹಿಷ್ಕರಿಸಬೇಕು. ಕನ್ನಡ ಚಿತ್ರರಂಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.