ಮಂಗಳವಾರ, ಆಗಸ್ಟ್ 16, 2022
21 °C

ಬೆಂಗಳೂರು: ವ್ಯಾಪಾರ-ವಹಿವಾಟು ಎಂದಿನಂತೆ, ಬಂದ್‌ಗೆ ನೀರಸ ಪ್ರತಿಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್‌ಗೆ ನಗರದಲ್ಲಿ ಸದ್ಯ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೆ.ಆರ್. ಮಾರುಕಟ್ಟೆ ಸೇರಿದಂತೆ ನಗರದಲ್ಲಿನ ಹೂವು, ಹಣ್ಣು, ತರಕಾರಿ ಮಾರುಕಟ್ಟೆಗಳಲ್ಲಿ ಎಂದಿನಂತೆ ವ್ಯಾಪಾರ-ವಹಿವಾಟು ನಡೆಯುತ್ತಿದೆ. ಸಾರ್ವಜನಿಕರು ನಿಧಾನವಾಗಿ ಮಾರುಕಟ್ಟೆಯತ್ತ ಬರುತ್ತಿದ್ದಾರೆ.

ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಕನ್ನಡಪರ ಸಂಘಟನೆಗಳ ಕೆಲವು ಕಾರ್ಯಕರ್ತರು ಮಾತ್ರ ಪ್ರತಿಭಟನೆ‌ ನಡೆಸುತ್ತಿದ್ದಾರೆ. ಬಲವಂತವಾಗಿ ಬಂದ್ ಮಾಡಿಸಲು ಪೊಲೀಸರು ಅವಕಾಶ ನೀಡುತ್ತಿಲ್ಲ.

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ನಿಲ್ದಾಣ, ಎಲ್ಲ ಮೆಟ್ರೊ ನಿಲ್ದಾಣಗಳ ಬಳಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತೆ ಒದಗಿಸಿದ್ದಾರೆ.

ಮೈಸೂರು ರಸ್ತೆ ಬಸ್ ನಿಲ್ದಾಣ ಒಂದರ ಬಳಿಯೇ ಒಂದು ಕೆ ಎಸ್ ಆರ್ ಪಿ ತುಕಡಿ, 20ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು