ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌: ಸುಖಾಸುಮ್ಮನೇ ಬಲಪ್ರಯೋಗ ಮಾಡಬೇಡಿ–ಕಮಿಷನರ್ ಸೂಚನೆ

Last Updated 10 ಮೇ 2021, 12:52 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಸೋಮವಾರದಿಂದ ಲಾಕ್‌ಡೌನ್ ಜಾರಿಯಾಗಿದ್ದು, ಈ ವೇಳೆ ಪೊಲೀಸರು ರಸ್ತೆಯಲ್ಲಿ ಹೋಗುವ ಎಲ್ಲರನ್ನೂ ತಡೆದು ಥಳಿಸುತ್ತಿದ್ದಾರೆ. ಈ ವರ್ತನೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದ್ದು, ‘ಲಾಠಿಯಿಂದ ಹೊಡೆಯಲು ನಿಮಗೆ ಅಧಿಕಾರ ಕೊಟ್ಟವರು ಯಾರು’ ಎಂದು ಪ್ರಶ್ನಿಸುತ್ತಿದ್ದಾರೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್, ‘ಸಾರ್ವಜನಿಕರು ಲಾಕ್ ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ಬೇರೆ ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು’ ಎಂದು ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.

‘ಲಾಕ್‌ಡೌನ್ ಜಾರಿಯಾಗಿರುವ ಸಮಯದಲ್ಲಿ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಒಪ್ಪಿಗೆ ನೀಡಲಾದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಥವಾ ಕೆಲಸದ ಸ್ಥಳಕ್ಕೆ ಪ್ರಯಾಣಿಸುವ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳಾದಲ್ಲಿ ಡಿಸಿಪಿ (ಗುಪ್ತದಳ) ಸಂತೋಷ್ ಬಾಬು ಅವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-22942354’ ಎಂದೂ ಅವರು ಹೇಳಿದ್ದಾರೆ.

‘ಸಾರ್ವಜನಿಕರು ಆದಷ್ಟು ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ. ಕೊರೊನಾ ಹರಡುವುದನ್ನು ತಡೆಯಲು ದಯವಿಟ್ಟು ಸಹಕರಿಸಿ’ ಎಂದೂ ಕಮಲ್ ಪಂತ್ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT