ಬೆಂಗಳೂರು: ಬಜೆಟ್ನಲ್ಲಿನ ಜನವಿರೋಧಿ ನೀತಿಗಳು ಮತ್ತು ಅನುದಾನ ಹಂಚಿಕೆಯಲ್ಲಿನ ತಾರತಮ್ಯದ ವಿರುದ್ಧ ಒಗ್ಗಟ್ಟಿನಿಂದ ಧ್ವನಿ ಎತ್ತಲು ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕರ ಕೊಠಡಿಯಲ್ಲಿ ಸೋಮವಾರ ಮಧ್ಯಾಹ್ನ ನಡೆದ ಸಭೆಯಲ್ಲಿ ಬಜೆಟ್ನಲ್ಲಿನ ತಾಂತ್ರಿಕ ಅಂಶಗಳು ಮತ್ತು ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳನ್ನು ಸದನದಲ್ಲಿ ಹೇಗೆ ಪ್ರಸ್ತಾಪಿಸಬೇಕು ಎಂಬ ಬಗ್ಗೆ ಶಾಸಕರಿಗೆ ಮಾರ್ಗದರ್ಶನ ನೀಡಲಾಯಿತು.

2026-27ನೇ ಸಾಲಿನ ಬಜೆಟ್ನ ಲೋಪದೋಷಗಳನ್ನು ಎತ್ತಿ ತೋರಿಸಲು ಮತ್ತು ಸದನದಲ್ಲಿ ಪರಿಣಾಮಕಾರಿಯಾಗಿ ಚರ್ಚೆ ನಡೆಸುವ ಉದ್ದೇಶದಿಂದ ವಿಧಾನ ಪರಿಷತ್ನ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸಭೆ ನಡೆಸಿ ಚರ್ಚಿಸಿದರು. ಉಭಯ ಪಕ್ಷಗಳ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.