ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget 2024: ಬಿಬಿಎಂಪಿಗೆ ತೆರಿಗೆ ಸಂಗ್ರಹದ ಗುರಿ

Published 16 ಫೆಬ್ರುವರಿ 2024, 23:33 IST
Last Updated 16 ಫೆಬ್ರುವರಿ 2024, 23:33 IST
ಅಕ್ಷರ ಗಾತ್ರ

ಬಿಬಿಎಂಪಿಗೆ ತೆರಿಗೆ ಸಂಗ್ರಹದ ಗುರಿ

₹4,300 ಕೋಟಿ

2023-24ನೇ ಸಾಲಿನಲ್ಲಿ ಸಂಗ್ರಹದ ದಾಖಲೆ ನಿರೀಕ್ಷೆ

₹6,000 ಕೋಟಿ

2024-25ರಲ್ಲಿ ತೆರಿಗೆ ಸಂಗ್ರಹ ಸಂಗ್ರಹದ ಗುರಿ

₹2,000 ಕೋಟಿ: ಜಾಹೀರಾತು ಮತ್ತು ಪ್ರೀಮಿಯಂ ಎಫ್ಎಆರ್ ನೀತಿಯಿಂದ ತೆರಿಗೆಯೇತರ ಸಂಪನ್ಮೂಲ ಸಂಗ್ರಹದ ಗುರಿ.

₹233 ಕೋಟಿ: ಬೆಂಗಳೂರು ನಗರದಲ್ಲಿ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ‘ವಿಜ್ಞಾನ ನಗರಿ’

20 ಲಕ್ಷ ಆಸ್ತಿ: ಬಿಬಿಎಂಪಿ ವ್ಯಾಪ್ತಿಯ ಎಲ್ಲ ಆಸ್ತಿ ಮಾಲೀಕರಿಗೆ ಡಿಜಿಟಲ್‌ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರ.

28 ಜಂಕ್ಷನ್‌: ಜಪಾನ್ ಸರ್ಕಾರದ ಸಹಯೋಗದೊಂದಿಗೆ ‘ಏರಿಯಾ ಟ್ರಾಫಿಕ್‌ ಸಿಗ್ನಲ್‌ ಕಂಟ್ರೋಲ್‌ ಸಿಸ್ಟಮ್‌’ ಅಳವಡಿಕೆ. ಶೇ 30ರಷ್ಟು ವಾಹನ ಸಂದಣಿ ಕಡಿಮೆಗೊಳಿಸುವ ಗುರಿ.

ರಾತ್ರಿ 1ರವರೆಗೆ ವ್ಯಾಪಾರ!

ನಗರದಲ್ಲಿ ವಾಣಿಜ್ಯ ಮತ್ತು ವ್ಯಾಪಾರವನ್ನು ವೃದ್ಧಿಸುವ ಹಿನ್ನೆಲೆಯಲ್ಲಿ ರಾತ್ರಿ 11 ಗಂಟೆಯವರೆಗಿದ್ದ ವಹಿವಾಟಿನ ನಿರ್ಬಂಧವನ್ನು ರಾತ್ರಿ 1ರವರೆಗೆ ವಿಸ್ತರಿಸುವುದಾಗಿ ಪ್ರಕಟಿಸಲಾಗಿದೆ.

ತಿಂಡಿ–ತಿನಿಸು ಮಾರುವ ಅಂಗಡಿಗಳು ಹಾಗೂ ಹೋಟೆಲ್‌ಗಳ ವಹಿವಾಟು ಅವಧಿಯನ್ನು ರಾತ್ರಿ 1 ಗಂಟೆಯವರೆಗೂ ವಿಸ್ತರಿಸಿ, ಅಂದಿನ ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು 2022 ಅ.14ರಂದು ಆದೇಶ ಹೊರಡಿಸಿದ್ದರು. ಆದರೆ ನಂತರದ ದಿನಗಳಲ್ಲಿ ಯಾವುದೇ ಆದೇಶವಿಲ್ಲದೇ 11ರ ನಂತರದ ವಹಿವಾಟಿಗೆ ತೆರೆ ಬಿದ್ದಿತ್ತು.

ಇದೀಗ ನಗರದಲ್ಲಿ ರಾತ್ರಿ 1ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಿ ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಇದು ಎಂದಿನಿಂದ ಜಾರಿಯಾಗುತ್ತದೆ ಎಂಬುದನ್ನು ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಆದೇಶ ಹೊರಡಿಸಲಿದೆ.

ನಗರದ ಪ್ರಮುಖ ರಸ್ತೆಗಳಲ್ಲಿ ₹1,700 ಕೋಟಿ ವೆಚ್ಚದಲ್ಲಿ 147 ಕಿ.ಮೀ ಉದ್ದದ ವೈಟ್‌ ಟಾಪಿಂಗ್‌ ರಸ್ತೆ ಕಾಮಗಾರಿ 2025 ಡಿಸೆಂಬರ್‌ಗೆ ಪೂರ್ಣ.

ಸಂಚಾರ ದಟ್ಟಣೆ ಅತ್ಯಂತ ತೀವ್ರವಾಗಿರುವ ಹೆಬ್ಬಾಳ ಜಂಕ್ಷನ್‌ನಲ್ಲಿ ಪ್ರಾಯೋಗಿಕವಾಗಿ ಸುರಂಗ ರಸ್ತೆ ಈ ವರ್ಷ ನಿರ್ಮಾಣ.

ರಾಜಕಾಲುವೆ ಬಫರ್‌ ಝೋನ್‌ನಲ್ಲಿ ಸರ್ವಋತು ರಸ್ತೆ ನಿರ್ಮಾಣ ₹200 ಕೋಟಿಯಲ್ಲಿ 
ಆರಂಭವಾಗಿದ್ದು, 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿ.

ಆರ್ಥಿಕ ಚಟುವಟಿಕೆಗಳು ದೊಡ್ಡ ಪ್ರಮಾಣದಲ್ಲಿ ವೃದ್ಧಿಸಲು ಸಹಕಾರಿಯಾಗಲು ಪೆರಿಫೆರಲ್  ವರ್ತುಲ ರಸ್ತೆ (ಪಿಆರ್‌ಆರ್) ಅನ್ನು ‘ಬೆಂಗಳೂರು ಬಿಸಿನೆಸ್ ಕಾರಿಡಾರ್’ ಪರಿಕಲ್ಪನೆಯಲ್ಲಿ ಪರಿಚಯ. ಪಿಪಿಪಿ ಮಾದರಿಯಲ್ಲಿ ₹27 ಸಾವಿರ ಕೋಟಿಯಲ್ಲಿ 73 ಕಿ.ಮೀ ಅಭಿವೃದ್ಧಿ.

ಬೆಂಗಳೂರು ನಗರದಲ್ಲಿ 250 ಮೀಟರ್‌ ಎತ್ತರದ ಸ್ಕೈ-ಡೆಕ್‌ ನಿರ್ಮಾಣಕ್ಕೆ ಅಂತರರಾಷ್ಟ್ರೀಯ ಮಟ್ಟದ ವಾಸ್ತುವಿನ್ಯಾಸಗಾರರ ಆಹ್ವಾನ.

ಬಿಬಿಎಂಪಿ, ಬಿಎಂಆರ್‌ಸಿಎಲ್‌, ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ವಿದ್ಯುತ್ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್ ಪಾರ್ಕ್  ಸ್ಥಾಪನೆ.

ತ್ಯಾಜ್ಯ ವಿಲೇವಾರಿಗೆ ನಗರ ಜಿಲ್ಲೆಯನ್ನು ನಾಲ್ಕು ವಲಯಗಳನ್ನಾಗಿ ವಿಂಗಡಿಸಿ, ಪ್ರತಿಯೊಂದು ವಲಯಕ್ಕೂ ನುರಿತ ಸಂಸ್ಥೆಯನ್ನು ಪಾರದರ್ಶಕವಾಗಿ ನೇಮಿಸಲಾಗುವುದು.

ಬಿಬಿಎಂಪಿಯ ಅರಣ್ಯ, ಕೆರೆ ಮತ್ತು ತೋಟಗಾರಿಕಾ ವಿಭಾಗವನ್ನು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ನಿರ್ವಹಣಾ ವಿಭಾಗ ಎಂದು ಮರುನಾಮಕರಣ. ಕೆರೆ ಮತ್ತು ಉದ್ಯಾನಗಳ ಅಭಿವೃದ್ಧಿಯಲ್ಲಿ ಸಾರ್ವಜನಿಕ ಸಹಭಾಗಿತ್ವವನ್ನು ಹೆಚ್ಚಿಸಲು ಪ್ರತ್ಯೇಕ ನೀತಿ.

ಬಿಬಿಎಂಪಿ ಸಹಯೋಗದೊಂದಿಗೆ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ‘ಸರ್ವಜ್ಞ ಉದ್ಯಾನ’ ಅಭಿವೃದ್ಧಿ.

ನಮ್ಮ ಮೆಟ್ರೊಗೆ 2025ರ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ ಮಾರ್ಗ ಸೇರ್ಪಡೆ.

ನಮ್ಮ ಮೆಟ್ರೋ ಹಂತ-3ಎ ರಡಿಯಲ್ಲಿ ಸರ್ಜಾಪುರದಿಂದ ಹೆಬ್ಬಾಳ ಸಂಪರ್ಕಿಸುವ ಮಾರ್ಗಕ್ಕೆ ಡಿ.ಪಿ.ಆರ್. ಕರಡು ಸಿದ್ಧ. ಕೇಂದ್ರ ಸರ್ಕಾರದ ಅನುಮೋದನೆಗೆ ಸಲ್ಲಿಸಲು ನಿರ್ಧಾರ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) 1,334 ಹೊಸ ಎಲೆಕ್ಟ್ರಿಕ್ ಬಸ್‌ ಹಾಗೂ 820 ಬಿಎಸ್-6 ಡೀಸೆಲ್ ಬಸ್‌ಗಳ ಸೇರ್ಪಡೆ.

ಬಿಎಂಟಿಸಿಯಲ್ಲಿ ಮಹಿಳಾ ಸುರಕ್ಷತೆಯನ್ನು ಒಳಗೊಂಡ ‘ವೆಹಿಕಲ್‌ ಟ್ರ್ಯಾಕಿಂಗ್’ ಮೊಬೈಲ್‌ ಆ್ಯಪ್‌ ಅನುಷ್ಠಾನ.

ಜಲಮಂಡಳಿಯಿಂದ ಕಾವೇರಿ ಹಂತ-5 ಯೋಜನೆಯಡಿ ಮೇ 2024ರ ವೇಳೆಗೆ 12 ಲಕ್ಷ ಜನರಿಗೆ ಪ್ರತಿದಿನ 110 ಲೀಟರ್ ಶುದ್ಧ ಕುಡಿಯುವ ನೀರು ಒದಗಿಸಲಾಗುವುದು.

ಕಾವೇರಿ ಹಂತ-5 ರಡಿಯಲ್ಲಿ ಒಳಚರಂಡಿ ಕಾಮಗಾರಿಗಳನ್ನು ಡಿಸೆಂಬರ್ 2024ರಲ್ಲಿ ಪೂರ್ಣಗೊಳಿಸಲಾಗುವುದು. 

ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು (ಎಸ್‌ಟಿಪಿ) ₹441 ಕೋಟಿ ವೆಚ್ಚದಲ್ಲಿ ಉನ್ನತೀಕರಣ. 268 ಎಂಎಲ್‌ಡಿ ತ್ಯಾಜ್ಯ ನೀರು ಸಂಸ್ಕರಣೆ.

₹200 ಕೋಟಿ ವೆಚ್ಚದಲ್ಲಿ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ

ಯುರೋಪ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಸರಕು ಸಾಗಣೆಗೆ ಮಂಗಳೂರು ಬಂದರಿನಿಂದ ಬೆಂಗಳೂರುವರೆಗೆ ಆರ್ಥಿಕ ಕಾರಿಡಾರ್ ಅಭಿವೃದ್ಧಿ. ಕಲ್ಯಾಣ ಕರ್ನಾಟಕ ಪ್ರದೇಶದ ಆರ್ಥಿಕ ಅಭಿವೃದ್ಧಿಯನ್ನು ಚುರುಕುಗೊಳಿಸಲು ಬೀದರ್ ಹಾಗೂ ಬೆಂಗಳೂರು ನಡುವೆ  ಕಾರಿಡಾರ್‌.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿ ನಿರ್ಮಾಣವಾಗುತ್ತಿರುವ ‘ಸಿಗ್ನೇಚರ್ ಬಿಸಿನೆಸ್ ಪಾರ್ಕ್‌’ನಿಂದ ಹಣಕಾಸು, ಉದಯೋನ್ಮುಖ ತಂತ್ರಜ್ಞಾನ ವಲಯಗಳು ಹಾಗೂ ಸಂಶೋಧನಾ ಸಂಸ್ಥೆಗಳಿಗೆ ಉತ್ತೇಜನ. ಒಟ್ಟು ₹817 ಕೋಟಿ  ಯೋಜನಾ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಸಿಗ್ನೇಚರ್ ಬಿಸಿನೆಸ್ ಪಾರ್ಕ್ ಮುಂದಿನ ದಿನಗಳಲ್ಲಿ ₹5,000 ಕೋಟಿ ಹೂಡಿಕೆ ಆಕರ್ಷಿಸುವ ನಿರೀಕ್ಷೆ ಇದೆ.

ಯಶವಂತಪುರದಲ್ಲಿ ಕೆ.ಎಸ್‌.ಡಿ.ಎಲ್ ವತಿಯಿಂದ ವಿವಿಧ ಸರ್ಕಾರಿ ಇಲಾಖೆಗಳು ಕಾರ್ಯನಿರ್ವಹಿಸಲು ಸುಸಜ್ಜಿತ ಕಚೇರಿ ಸಂಕೀರ್ಣ.

ಬೆಂಗಳೂರು ಇಂಡಿಯಾ ನ್ಯಾನೋ ಅಂತರರಾಷ್ಟ್ರೀಯ ಸಮ್ಮೇಳನ ಆಯೋಜನೆ. ಸಮ್ಮೇಳನದ ಪೂರ್ವಭಾವಿಯಾಗಿ ಜನಸಮುದಾಯದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಒಂದು ತಿಂಗಳು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಉತ್ಸವ.

ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ 70 ಎಕರೆ ನಿವೇಶನದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅತ್ಯಾಧುನಿಕ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾ ಸಮುಚ್ಛಯ ಒಳಗೊಂಡ ‘ಕ್ರೀಡಾ ನಗರ’ ಸ್ಥಾಪನೆ.

ಬೆಂಗಳೂರಿನ 4 ಸ್ಥಳಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಹುಕ್ರೀಡಾ ಸೌಲಭ್ಯಗಳನ್ನೊಳಗೊಂಡ ಅತ್ಯಾಧುನಿಕ ‘ಕ್ರೀಡಾ ಸಂಕೀರ್ಣ’.

ಬೆಂಗಳೂರಿನ ಪೊಲೀಸ್ ಸುಲಿವನ್ ಮೈದಾನದಲ್ಲಿ ₹3 ಕೋಟಿ ವೆಚ್ಚದಲ್ಲಿ ‘ಆಸ್ಟ್ರೋ ಟರ್ಫ್ ಹಾಕಿ ಪ್ರಾಂಗಣ’ ನಿರ್ಮಾಣ.

ಬೆಂಗಳೂರಿನ ಖಾಸಗಿ ವಸತಿ ಸಮುಚ್ಚಯಗಳಲ್ಲಿ ಸಂಸ್ಕರಿಸಿದ ನೀರನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನಿಗದಿಪಡಿಸಿದ ಮಾನದಂಡಗಳ ಪ್ರಕಾರ, ಮರುಬಳಕೆ ಮಾಡಲು ಪ್ರೋತ್ಸಾಹ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT