ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಗೃಹ ಇಲಾಖೆಯಲ್ಲಿ ಖಾಲಿ ಇರುವ ಒಟ್ಟಾರೆ 8 ಸಾವಿರ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು. ಹುದ್ದೆಗಳ ನೇಮಕಾತಿಯನ್ನು ಕ್ರಮಬದ್ಧ, ಪಾರದರ್ಶಕ ಮತ್ತು ನಿಯಮಿತವಾಗಿ ನಡೆಸಲು ಶಾಶ್ವತ ಪೊಲೀಸ್ ಮತ್ತು ಪೊಲೀಸ್ ಸಹಾಯಕ ಸೇವೆಗಳ ನೇಮಕಾತಿ ಮಂಡಳಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ₹ 250 ಕೋಟಿ ವೆಚ್ಚದಲ್ಲಿ ವಸತಿ ಗೃಹಗಳ ನಿರ್ಮಾಣ ಕಾಮಗಾರಿ ಕೈಗೆತ್ತಿಗೊಳ್ಳಲಾಗುವುದು. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ವಿಧಾನಮಂಡಲದ ಅಧಿವೇಶನದ ಸಮಯದಲ್ಲಿ ಬಂದೋಬಸ್ತ್ ಕಾರ್ಯಕ್ಕೆ ನಿಯೋಜಿಸಲಾಗುವ ಸಿಬ್ಬಂದಿಗೆ ವಸತಿ ಸೌಲಭ್ಯ ಒದಗಿಸಲು ₹20 ಕೋಟಿ ವೆಚ್ಚದಲ್ಲಿ 1 ಸಾವಿರ ಸಿಬ್ಬಂದಿಗೆ ಶಾಶ್ವತ ಬ್ಯಾರಕ್ ನಿರ್ಮಿಸಲು ಉದ್ದೇಶಿಸಲಾಗಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹಾಗೂ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ದೃಷ್ಟಿಯಿಂದ 12 ನೂತನ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು. ಪ್ರಸಕ್ತ ವರ್ಷದಲ್ಲಿ ನಿವೇಶನ ಲಭ್ಯವಿರುವ 10 ಪೊಲೀಸ್ ಠಾಣೆ ಕಟ್ಟಡಗಳನ್ನು ₹30 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು.

ಬೆಂಗಳೂರಿನಲ್ಲಿ ಗರಿಷ್ಠ ಭದ್ರತಾ ಕೇಂದ್ರ ಕಾರಾಗೃಹ ಹಾಗೂ ವಿಜಯಪುರ ಮತ್ತು ಬೀದರ್ಗಳಲ್ಲಿ ತಲಾ ಒಂದು ಸಾವಿರ ಬಂದಿಗಳ ಸಾಮರ್ಥ್ಯದ ಜಿಲ್ಲಾ ಕೇಂದ್ರ ಕಾರಾಗೃಹಗಳನ್ನು ₹471 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತದೆ.

ಮಂಗಳೂರು ಕೇಂದ್ರ ಕಾರಾಗೃಹದ ಎರಡನೇ ಹಂತದ ಕಾಮಗಾರಿಯನ್ನು ಮತ್ತು ರಾಯಚೂರು ಜಿಲ್ಲಾ ಕೇಂದ್ರ ಕಾರಾಗೃಹಗಳ ನಿರ್ಮಾಣ ಕಾರ್ಯವನ್ನು ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.