ಬೆಂಗಳೂರು: ಕೃಷಿ ಪರಿಕರಗಳು ಒಂದೇ ಕಡೆ ಲಭ್ಯವಾಗುವಂತೆ ಮಾಡಲು ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ‘ರೈತ ಮಾಲ್’ಆರಂಭಿಸುವುದಾಗಿ ಬಜೆಟ್ನಲ್ಲಿ ಪ್ರಕಟಿಸಲಾಗಿದೆ.

ರೈತರಿಗೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಕೈಗೆಟುಕುವ ದರದಲ್ಲಿ ಲಭ್ಯವಾಗಿಸುವುದರ ಜತೆಗೆ ಮಾರುಕಟ್ಟೆ ಗೊಂದಲ ನಿವಾರಿಸಲು ಬಿತ್ತನೆ ಬೀಜ, ಕೀಟನಾಶಕ, ರಸಗೊಬ್ಬರ ಹಾಗೂ ಕೃಷಿ ಯಂತ್ರೋಪಕರಣಗಳು ಒಂದೇ ಸೂರಿನಡಿ ಮಾರಾಟ ಮಾಡಲು ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಮಾಲ್ ಸ್ಥಾಪಿಸುವ ಯೋಜನೆ ರೂಪಿಸಲಾಗಿದೆ.

ತೋಟಗಾರಿಕೆ ಇಲಾಖೆ ಕ್ಷೇತ್ರ ಮತ್ತು ನರ್ಸರಿಗಳ ಜಮೀನು ಉಪಯೋಗಿಸಿ ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯ ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸುವುದಾಗಿ ತಿಳಿಸಲಾಗಿದೆ. ಅಡಿಕೆ ಬೆಳೆಯ ಎಲೆ ಚುಕ್ಕಿ, ಹಳದಿ ಎಲೆ, ಕೊಳೆ ರೋಗಗಳು ಮತ್ತು ತೆಂಗು ಬೆಳೆಯ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕೆ ವಿಶ್ವವಿದ್ಯಾಲಯ, ಕೃಷಿ ವಿಜ್ಞಾನ ಕೇಂದ್ರ ಸಹಯೋಗದಲ್ಲಿ ಸಮುದಾಯ ಆಧಾರಿತ ರೋಗ–ಕೀಟ ನಿಯಂತ್ರಣ ಕ್ರಮಗಳನ್ನು ₹10 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಮೇಕೆ ತಳಿಗಳ ಉನ್ನತೀಕರಣಕ್ಕೆ ಮೈಸೂರಿನಲ್ಲಿ ಬೋಯರ್ ಮೇಕೆ ತಳಿ ಸಂವರ್ಧನಾ ಕೇಂದ್ರ ಆರಂಭಿಸಲಾಗುತ್ತದೆ.

ಒಳನಾಡು ಮೀನುಗಾರಿಕೆ ಚಟುವಟಿಕೆ ಪ್ರೋತ್ಸಾಹ ನೀಡಲು, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳನ್ನು ಆರಂಭಿಸುವುದಾಗಿ ಘೋಷಿಸಲಾಗಿದೆ. ಸಹಕಾರ ಇಲಾಖೆಯಡಿ ಮೆಕ್ಕೆಜೋಳ ಖರೀದಿಸಲು ₹ 100 ಕೋಟಿ ನೆರವು, ಎಪಿಎಂಸಿ ಕಾರ್ಯಚಟುವಟಿಕೆ ಡಿಜಿಟಲೀಕರಣ, ಇಆರ್ಪಿ ಜಾರಿಗೆ ₹ 10 ಕೋಟಿ ಮೀಸಲಿಡಲಾಗಿದೆ.

ಏನಿದೆ ವಿಶೇಷ?

ಪರಿಸರ ಸ್ನೇಹಿ, ಸುಸ್ಥಿರ ಕೃಷಿ ಪದ್ಧತಿ ಉತ್ತೇಜನಕ್ಕೆ ʻವಸುಧಾಮೃತʼ

ಎಐ ತಂತ್ರಜ್ಞಾನದಿಂದ ʻರೈತ ಕರೆ ಕೇಂದ್ರʼಗಳ ಉನ್ನತೀಕರಣ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ ಜಿಲ್ಲೆಯಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆ

ಗ್ರಾಮೀಣ ಭಾಗದಲ್ಲಿ ಆದಾಯೋತ್ಪನ್ನ ಘಟಕ ಸ್ಥಾಪನೆಗೆ ₹ 25 ಕೋಟಿ

ಸಣ್ಣ ನೀರಾವರಿ ಇಲಾಖೆಯಡಿಯ ಕೆರೆ ಬಳಕೆದಾರರ ಸಂಘಗಳ ಬಲವರ್ಧನೆ

ಸಂಪೂರ್ಣ ಸಾವಯವ ತಾಲ್ಲೂಕು

ಮಂಡ್ಯ ಜಿಲ್ಲೆಯ ಪಾಂಡವಪುರವನ್ನು ಸಂಪೂರ್ಣ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸಿ, ಅಧಿಕೃತ ಸಾವಯವ ಪ್ರಮಾಣೀಕರಣ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಯೋಜನೆಯನ್ನು ರಾಜ್ಯ ಬಜೆಟ್ನಲ್ಲಿ ಘೋಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.